ಮಂಗಳವಾರ, ಆಗಸ್ಟ್ 4, 2020
25 °C

ಕೇಂದ್ರದ ಧೋರಣೆ ಖಂಡಿಸಿ 20ಕ್ಕೆ ನಾಯ್ಡು ಉಪವಾಸ

ಎಪಿ Updated:

ಅಕ್ಷರ ಗಾತ್ರ : | |

ಕೇಂದ್ರದ ಧೋರಣೆ ಖಂಡಿಸಿ 20ಕ್ಕೆ ನಾಯ್ಡು ಉಪವಾಸ

ಅಮರಾವತಿ: ಆಂಧ್ರಪ್ರದೇಶದ ಬಗ್ಗೆ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ವಿರೋಧಿಸಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇದೇ 20ರಂದು ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

127ನೇ ಅಂಬೇಡ್ಕರ್ ಜಯಂತಿಯ ಅಂಗವಾಗಿ ಇನಾವೋಲು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿರುವ ನಾಯ್ಡು, ‘ಏಪ್ರಿಲ್ 20ರಂದು ನನ್ನ ಹುಟ್ಟಿದ ದಿನ. ಅದೇ ದಿನ ಉಪವಾಸ ಮಾಡುತ್ತೇನೆ’ ಎಂದಿದ್ದಾರೆ.

‘ಟಿಡಿಪಿ ಮತ್ತೊಮ್ಮೆ ಕಿಂಗ್‌ ಮೇಕರ್‌ ಆಗಿ ಹೊರಹೊಮ್ಮುವುದು ಖಚಿತ. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸಬೇಕು, ಯಾರು ಪ್ರಧಾನಿಯಾಗಬೇಕು ಎಂಬುದನ್ನು ನಾವೇ ನಿರ್ಧರಿಸುತ್ತೇವೆ. ಈ ಹಿಂದೆ ಕೇಂದ್ರದಲ್ಲಿ ನಮ್ಮ ಮಾತಿಗೆ ಸಾಕಷ್ಟು ಮನ್ನಣೆ ಸಿಗುತ್ತಿತ್ತು. ಇನ್ನು ಮುಂದೆಯೂ ನಮ್ಮ ಮಾತೇ ನಡೆಯಲಿದೆ. ಕೇಂದ್ರವನ್ನು ನಿಯಂತ್ರಿಸುವ ಏಕೈಕ ಪಕ್ಷ ನಮ್ಮದಾಗಲಿದೆ’ ಎಂದು ನಾಯ್ಡು ತಿಳಿಸಿದ್ದಾರೆ.

‘ರಾಜ್ಯದಲ್ಲಿನ 25 ಲೋಕಸಭಾ ಸ್ಥಾನಗಳಲ್ಲಿ ಪಕ್ಷವನ್ನು ಗೆಲ್ಲಿಸಿ, ಕೇಂದ್ರದಲ್ಲಿ ಅಧಿಪತ್ಯ ಸಾಧಿಸಲು ಸಹಾಯ ಮಾಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

‘ರಾಜ್ಯದ ಹಿತಾಸಕ್ತಿ ಕಾಪಾಡಲು ಬಿಜೆಪಿ ಜತೆ ಕೈಜೋಡಿಸಲಾಗಿತ್ತು. ಆದರೆ, ಬಿಜೆಪಿ ನಮಗೆ ನಂಬಿಕೆ ದ್ರೋಹ ಮಾಡಿತು. ಯಾವುದೇ ರೀತಿ ರಾಜಿ ಮಾಡಿಕೊಳ್ಳದೆ ರಾಜ್ಯದ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.