ಭಾನುವಾರ, ಡಿಸೆಂಬರ್ 15, 2019
25 °C

ಪೊಲೀಸ್‌ ನೇಮಕಾತಿ; ತಾತ್ಕಾಲಿಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೊಲೀಸ್‌ ನೇಮಕಾತಿ; ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಸಬ್‌ ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿಗಾಗಿ ನಡೆಯುತ್ತಿದ್ದ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕೆಎಸ್‌ಆರ್‌ಪಿಯ 38 ಸಬ್‌ ಇನ್‌ಸ್ಪೆಕ್ಟರ್‌, 419 ಕಾನ್‌ಸ್ಟೆಬಲ್ ಹಾಗೂ 164 ಸಿವಿಲ್ ಸಬ್‍ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಫೆಬ್ರುವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿಸಲ್ಲಿಕೆ ದಿನಾಂಕವನ್ನು ಏಪ್ರಿಲ್‌ಗೆ ಮುಂದೂಡಲಾಗಿತ್ತು.

ಆದರೆ ಅವಧಿ ಮುನ್ನವೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದರಿಂದಾಗಿ ಪ್ರಕ್ರಿಯೆಯನ್ನೇ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ನೇಮಕಾತಿ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದರು.

‘ಸಿವಿಲ್ ಸಬ್‍ ಇನ್‌ಸ್ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 17ರವರೆಗೆ ಅವಕಾಶ ನೀಡಲಾಗಿತ್ತು. ಅದಕ್ಕೂ ಮುನ್ನವೇ ಅರ್ಜಿ ಪಡೆಯುವುದನ್ನು ನಿಲ್ಲಿಸಿದ್ದೇವೆ. ಚುನಾವಣೆ ಮುಗಿದ ಬಳಿಕವೇ ಪ್ರಕ್ರಿಯೆ ಆರಂಭಿಸಲಿದ್ದೇವೆ. ಅರ್ಜಿ ಸಲ್ಲಿಕೆ ಅವಧಿಯನ್ನು ಪುನಃ ವಿಸ್ತರಣೆ ಮಾಡುವ ಯೋಚನೆ ಇದೆ’ ಎಂದರು.

ಪ್ರತಿಕ್ರಿಯಿಸಿ (+)