ಕಾಂಗ್ರೆಸ್‌ ಪರ ಪ್ರಚಾರ: ಕ್ರಮ ಕೈಗೊಳ್ಳಲು ವಿ.ವಿ.ಗೆ ಪತ್ರ

7

ಕಾಂಗ್ರೆಸ್‌ ಪರ ಪ್ರಚಾರ: ಕ್ರಮ ಕೈಗೊಳ್ಳಲು ವಿ.ವಿ.ಗೆ ಪತ್ರ

Published:
Updated:

ಮೈಸೂರು: ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಕಾಂಗ್ರೆಸ್‌ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮೈಸೂರು ವಿಶ್ವವಿದ್ಯಾನಿಲಯದ ಇಬ್ಬರು ಪ್ರಾಧ್ಯಾಪಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಅಧಿಕಾರಿಗಳು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪತ್ರ ಬರೆದಿದ್ದಾರೆ.

ಮೈಸೂರು ವಿ.ವಿ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಬಿ.ಪಿ.ಮಹೇಶಚಂದ್ರ ಗುರು ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕ ಅರವಿಂದ ಮಾಲಗತ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಮೈಸೂರಿನಲ್ಲಿ ಶುಕ್ರವಾರ ‘ಜನರಾಜಕಾರಣ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಿದ್ದರಾಮಯ್ಯ ಪರ ಮತಯಾಚಿಸಿದ್ದರು.

ಮೈಸೂರು ವಿ.ವಿ ಕುಲಸಚಿವರಾದ ಡಿ.ಭಾರತಿ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಅಧಿಕಾರಿ ಬಿ.ವೆಂಕಟೇಶ್‌ ಪತ್ರ ಬರೆದು ಕ್ರಮಕ್ಕೆ ಸೂಚಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry