5

‘ಸಂವಿಧಾನ ರಚನೆಯೇ ಸರಿಯಿಲ್ಲ’

Published:
Updated:

ವಿಜಯಪುರ: ‘ಸಂವಿಧಾನ ರಚನೆಯೇ ಸರಿಯಾದ ರೀತಿಯಲ್ಲಿ ಆಗಿಲ್ಲ. ಅದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಕಾರಣರಲ್ಲ; ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಅವಸರ ಕೂಡ ಕಾರಣ’ ಎಂದು ರಾಮಕೃಷ್ಣ– ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಹಿಂದಿನಿಂದಲೂ ದೇಶದಲ್ಲಿನ ಬಹುಸಂಖ್ಯಾತರನ್ನು ಅಲ್ಪಸಂಖ್ಯಾತರೇ ಆಳಿದ್ದು, ಇದನ್ನು ಬಹುಸಂಖ್ಯಾತರು ಸಹಿಸಿಕೊಂಡು ಬಂದಿದ್ದಾರೆ. ಆದರೆ ಮೀಸಲಾತಿಯನ್ನು ಎಲ್ಲರಿಗೂ ಹಂಚುವಂತಾಗಬೇಕು ಎಂದು ಅವರು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.

ವ್ಯಾಟಿಕನ್‌ ಚರ್ಚ್‌ನಲ್ಲಿ ಮೇ 15ರಂದು ಆಯೋಜಿಸಲಾದ ಅಂತರರಾಷ್ಟ್ರೀಯ ಧಾರ್ಮಿಕ ಸಮ್ಮೇಳನದಲ್ಲಿ ತಾವು ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದ ಅವರು, ‘ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮಕ್ಕೆ ಮತಾಂತರ ಆಗುತ್ತಿರುವವರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry