4

'ಆದಿತ್ಯನಾಥಗೆ ಚಪ್ಪಲಿಯಲ್ಲಿ ಹೊಡಿಬೇಕೆಂಬ ಮಾತನ್ನು ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ ಆ ಕೆಲಸವನ್ನು ನಿಮ್ಮ ಪತ್ನಿ ನಿಮಗೆ ಮಾಡುತ್ತಿದ್ದರು'

Published:
Updated:
'ಆದಿತ್ಯನಾಥಗೆ ಚಪ್ಪಲಿಯಲ್ಲಿ ಹೊಡಿಬೇಕೆಂಬ ಮಾತನ್ನು ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ ಆ ಕೆಲಸವನ್ನು ನಿಮ್ಮ ಪತ್ನಿ ನಿಮಗೆ ಮಾಡುತ್ತಿದ್ದರು'

ಬೆಂಗಳೂರು: ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡೆಯಿರಿ’ ಎಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ ಸಿಂಹ, ‘ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ ನಿಮ್ಮ ಹೆಂಡತಿಯೇ ಆ ಕೆಲಸ ಮಾಡುತ್ತಿದ್ದರು’ ಎಂದು ಹೇಳಿದ್ದಾರೆ.

'ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು, ನಾಲಗೆ ಮೇಲೆ ನಿಗಾ ಇರಲಿ' ಎಂದು ಪ್ರತಾಪ್‌ ಸಿಂಹ ಟ್ವೀಟ್‌ ಮಾಡಿದ್ದಾರೆ.

ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆಯನ್ನು ಖಂಡಿಸಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಶನಿವಾರ ಪಕ್ಷ ಆಯೋಜಿಸಿದ್ದ ಮೋಂಬತ್ತಿ ಬೆಳಗಿಸಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ದಿನೇಶ್‌ ಗುಂಡೂರಾವ್‌ ಈ ಹೇಳಿಕೆ ನೀಡಿದ್ದರು. ‘ಮೋಸಗಾರ, ಸುಳ್ಳುಗಾರ ಯೋಗಿ ಮತ್ತೊಮ್ಮೆ ರಾಜ್ಯಕ್ಕೆ ಬಂದರೆ ಬುದ್ಧಿ ಕಲಿಸುತ್ತೇವೆ’ ಎಂದು ಕಿಡಿಕಾರಿದ್ದರು.

‘ಯೋಗಿ ಆದಿತ್ಯನಾಥ್ ಅಲ್ಲ, ಬೋಗಿ ಆದಿತ್ಯನಾಥ್. ಅಂಥ ವ್ಯಕ್ತಿ ಕರ್ನಾಟಕದ ಪವಿತ್ರ ಭೂಮಿಗೆ ಬಂದರೆ ಕಳಂಕವಾಗುತ್ತದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅವನು‌ ನಾಲಾಯಕ್. ಪ್ರಧಾನಿ ನರೇಂದ್ರ ‌ಮೋದಿ ತಕ್ಷಣ ಅವನನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಬಿಸಾಕಬೇಕು’ ಎಂದೂ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry