ಮಂಗಳವಾರ, ಆಗಸ್ಟ್ 4, 2020
25 °C

ಅತ್ಯಾಚಾರ: ಸಂತ್ರಸ್ತೆಯರಿಗೆ ನ್ಯಾಯ ಒದಗಿಸಿ

ಪಿಟಿಐ Updated:

ಅಕ್ಷರ ಗಾತ್ರ : | |

ಅತ್ಯಾಚಾರ: ಸಂತ್ರಸ್ತೆಯರಿಗೆ ನ್ಯಾಯ ಒದಗಿಸಿ

ಲಂಡನ್‌: ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳಲ್ಲಿನ ಸಂತ್ರಸ್ತೆಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಠಿಣ ಕ್ರಮಕೈಗೊಳ್ಳುವಂತೆ ಲಂಡನ್‌ನಲ್ಲಿರುವ ಭಾರತದ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮೋದಿ ಅವರ ನಾಲ್ಕು ದಿನಗಳ ಲಂಡನ್‌ ಭೇಟಿ ಹಿನ್ನೆಲೆಯಲ್ಲಿ ‘ದಿ ನ್ಯಾಷನಲ್‌ ಇಂಡಿಯನ್‌ ಸ್ಟೂಡೆಂಟ್ಸ್‌’ (ಎನ್‌ಐಎಸ್‌ಎಯು) ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಸೇರಿದಂತೆ 19ಕ್ಕೂ ಹೆಚ್ಚು ಭಾರತ ಮೂಲದ ಸಂಸ್ಥೆಗಳು ಲಂಡನ್‌ನಲ್ಲಿನ ಭಾರತದ ಹೈಕಮಿಷನ್‌ ಕಚೇರಿಗೆ ತೆರಳಿ ಪತ್ರವನ್ನು ನೀಡಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಗುಜರಾತ್‌ನಲ್ಲಿ ಈಚೆಗೆ ನಡೆದ ಅತ್ಯಾಚಾರ ಪ್ರಕರಣಗಳ ಸಂಬಂಧ ಕಠಿಣವಾದ ನಿರ್ಧಾರ ಕೈಗೊಳ್ಳಬೇಕು’ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ಬುಧವಾರ ಇಲ್ಲಿ ಆಯೋಜಿಸಿರುವ ‘ಭಾರತ್‌ ಕಿ ಬಾತ್‌ ಸಬ್‌ ಕೆ ಸಾತ್‌’ (ಎಲ್ಲರೊಂದಿಗೆ ಭಾರತದ ಮಾತು) ಕಾರ್ಯಕ್ರಮ ಉದ್ದೇಶಿಸಿ ತಾವು ಮಾತನಾಡಲಿದ್ದೀರಿ. ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವ ಬಗೆಯ ಕ್ರಮ ಕೈಗೊಳ್ಳುವಿರಿ ಎಂಬುದನ್ನು ಅಂದು ಘೋಷಿಸಬೇಕು’ ಎಂದು ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.