ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾನಿಟರಿ ನ್ಯಾಪ್‍ಕಿನ್ ವಿತರಣೆಗೆ ಚಾಲನೆ

Last Updated 15 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್‍ಕಿನ್‍ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಲಯನ್ಸ್ ಕ್ಲಬ್ ಡಿಸ್ಟ್ರಿಕ್ಸ್ 317ಎ ಭಾನುವಾರ ಇಲ್ಲಿ ನಡೆದ ‘ಸಮರ್ಪಣ‘ ಸಮಾವೇಶದಲ್ಲಿ ಚಾಲನೆ ನೀಡಿತು.

ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳ 120ಕ್ಕೂ ಹೆಚ್ಚು ಲಯನ್ಸ್ ಕ್ಲಬ್‍ಗಳ ಸಾವಿರಕ್ಕೂ ಹೆಚ್ಚು ಸದಸ್ಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ವೈ.ಕೆ. ಮುದ್ದುಕೃಷ್ಣ ಸಮಾವೇಶವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಿ. ದಿವಾಕರ್ ‘ಸ್ವಚ್ಛ ಭಾರತ ಕಾರ್ಯಕ್ರಮದಡಿ, ಗ್ರಾಮೀಣ ಶಾಲಾ ಬಾಲಕಿಯರು ಮತ್ತು ಮಹಿಳೆಯರಿಗಾಗಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. 2018ರ ಫೆಬ್ರುವರಿಯವರೆಗೆ
185 ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ. ಇನ್ನು 50ಕ್ಕೂ ಹೆಚ್ಚು ಶೌಚಾಲಯಗಳ ನಿರ್ಮಾಣ ಪ್ರಗತಿಯಲ್ಲಿದೆ’ ಎಂದು
ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT