ಗುರುವಾರ , ಡಿಸೆಂಬರ್ 12, 2019
20 °C

ವೀರಪ್ಪನ್ ಸಹಚರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೀರಪ್ಪನ್ ಸಹಚರ ಸಾವು

ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವೀರಪ್ಪನ್ ಸಹಚರ ಸೈಮನ್ (45), ಚಿಕಿತ್ಸೆಗೆ ಸ್ಪಂದಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ.

ಚಾಮರಾಜನಗರದ ಪಾಲಾರ್‌ನಲ್ಲಿ 1993ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಯಾಗಿದ್ದ ಕೊಳ್ಳೇಗಾಲದ ಸೈಮನ್‌, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ.

ಆರಂಭದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂದಿಯಾಗಿದ್ದ ಆತನನ್ನು 2015ರ ಜನವರಿ 5ರಂದು ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಕಿಡ್ನಿ ಸಮಸ್ಯೆ ಕಾಣಿಸಿಕೊಂಡಿತ್ತು.

ಚಿಕಿತ್ಸೆಗೆ ನೆರವಾಗಲೆಂದು ಏಪ್ರಿಲ್ 4ರಂದು ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗತ್ತು. ನಂತರವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಪ್ರಕರಣದ ಅಪರಾಧಿಗಳಾಗಿದ್ದ ಸೈಮನ್‌, ಮೀಸೆಕಾರ ಮಾದ, ಜ್ಞಾನಪ್ರಕಾಶ್ ಹಾಗೂ ಬಿಳೇಂದ್ರಗೆ ಆರಂಭದಲ್ಲಿ ಮರಣ ದಂಡನೆ ಆಗಿತ್ತು. ಅದನ್ನು ಪ್ರಶ್ನಿಸಿ ಅಪರಾಧಿಗಳು, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನಂತರ, ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಕೋರ್ಟ್‌ ಆದೇಶ ಹೊರಡಿಸಿತ್ತು’ ಎಂದು ಕಾರಾಗೃಹದ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರತಿಕ್ರಿಯಿಸಿ (+)