ಗುರುವಾರ, 28 ಮಾರ್ಚ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಶಾಸಕ ಪಿ.ಹೆಚ್.ಪೂಜಾರಗೆ ಟಿಕೆಟ್‌ ನೀಡದಿರುವುದಕ್ಕೆ ಬೆಂಬಲಿಗರ ಆಕ್ರೋಶ

Last Updated 16 ಏಪ್ರಿಲ್ 2018, 9:54 IST
ಅಕ್ಷರ ಗಾತ್ರ

ಬಾಗಲಕೋಟೆ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರಗೆ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮುಧೋಳದ ರನ್ನ ವೃತ್ತದಲ್ಲಿ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ.

ಟಿಕೆಟ್ ಕೈ ತಪ್ಪಲು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಕಾರಣ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಬಿಜೆಪಿಯ ಗೋವಿಂದ ಕಾರಜೋಳ ವಿರುದ್ಧ ಸೋಲನ್ನಪ್ಪಿದ್ದ ತಿಮ್ಮಾಪುರ ಅವರನ್ನು ನಂತರ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಿ ಸಚಿವ ಸ್ಥಾನ ನೀಡಲಾಗಿತ್ತು.

ಈ ಬಾರಿ ಸತೀಶ ಬಂಡಿವಡ್ಡರ ಅವರಿಗೆ ಟಿಕೆಟ್ ನೀಡಲಾಗಿದೆ.

ಎಚ್.ವೈ.ಮೇಟಿಗೆ ಟಿಕೆಟ್‌: ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಮಾಜಿ ಶಾಸಕ ಪಿ.ಹೆಚ್.ಪೂಜಾರ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬೆಂಬಲಿಗರು ನಗರದಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಮನೆ ಎದುರು ಪ್ರತಿಭಟನೆ ನಡೆಸಿದರು.

ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಕಳಂಕಿತ ಶಾಸಕ ಎಚ್.ವೈ.ಮೇಟಿ ಅವರಿಗೆ ಟಿಕೆಟ್ ಕೊಟ್ಟಿರುವುದು ಸರಿಯಲ್ಲ. ಇದು ನನ್ನ ಕೊನೆಯ ಚುನಾವಣೆ. ಮುಂದಿನ ಬಾರಿ ನಿನಗೆ ಟಿಕೆಟ್ ಕೊಡಿಸುವೆ ಎಂದು ಹೇಳಿ ಕಳೆದ ಚುನಾವಣೆಯಲ್ಲಿ ಪೂಜಾರ ಬೆಂಬಲ ಪಡೆದು ಆಯ್ಕೆಯಾಗಿದ್ದ ಮೇಟಿ ವಚನ ಭ್ರಷ್ಟರಾಗಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಬಿಜೆಪಿ, ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪೂಜಾರ ಕಳೆದ ಬಾರಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಕಾರ್ಯಕರ್ತರ ನಿರ್ಧಾರಕ್ಕೆ ಬದ್ಧ: ಬಸವರಾಜ ಶಿವಣ್ಣವರ

ಹಾವೇರಿ: ನಾನು ಕಾರ್ಯಕರ್ತರ ನಿರ್ಧಾರಕ್ಕೆ ಬದ್ಧ ಎಂದು ಬ್ಯಾಡಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಶಾಸಕ ಬಸವರಾಜ ಶಿವಣ್ಣವರ ತಿಳಿಸಿದರು.

ಬೆಂಗಳೂರು ಅಥವಾ ಎಲ್ಲಿಂದ ಬೇಕಾದರೂ ನಾಯಕರು ಕರೆ ಮಾಡಲಿ. ನಾನು ಮಾತ್ರ ಬೆಂಬಲಿಗರು ಮತ್ತು ಕ್ಷೇತ್ರದ ಕಾರ್ಯಕರ್ತರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಕ್ಷೇತ್ರದ ಕಾರ್ಯಕರ್ತರ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT