ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

7
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ–ತರೀಕೆರೆ ಶಾಸಕರಿಗೆ ತಪ್ಪಿದ ಟಿಕೆಟ್

ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

Published:
Updated:

ಚಿಕ್ಕಮಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ರಾತ್ರಿ ಪ್ರಕಟಿಸಿದ್ದು, ಕುತೂಹಲಕ್ಕೆ ತೆರೆಬಿದ್ದಿದೆ. ಜಿಲ್ಲೆಯ ಐದೂ ಕ್ಷೇತ್ರಗಳ ಟಿಕೆಟ್‌ ಘೋಷಣೆಯಾಗಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಒಕ್ಕಲಿಗ ಸಮುದಾಯದ ಬಿ.ಎಲ್‌.ಶಂಕರ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ನಿರೀಕ್ಷೆಯಂತೆ ವಿಧಾನ ಪರಿಷತ್‌ ಸದಸ್ಯೆ ದಲಿತ ಸಮುದಾಯದ ಮೋಟಮ್ಮ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಇನ್ನು ಶೃಂಗೇರಿ ಕ್ಷೇತ್ರದಲ್ಲಿಯೂ ನಿರೀಕ್ಷೆಯಂತೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ, ಕಳೆದ ಬಾರಿ ಸೋತಿದ್ದ ಒಕ್ಕಲಿಗ ಸಮುದಾಯದ ಟಿ.ಡಿ.ರಾಜೇಗೌಡ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಕಡೂರು ಕ್ಷೇತ್ರದಲ್ಲಿ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಮಾಜಿ ಪ್ರಧಾನ ಕಾರ್ಯದರ್ಶಿ ಕುರುಬ ಸಮುದಾಯದ ಕೆ.ಎಸ್‌.ಆನಂದ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

ತರೀಕೆರೆ ಕ್ಷೇತ್ರದಲ್ಲಿ ಮಾಜಿ ಶಾಸಕ ಲಿಂಗಾಯತ ಸಮುದಾಯದ ಎಸ್‌.ಎಂ.ನಾಗರಾಜ್‌ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ’

ಬಿ.ಎಲ್‌.ಶಂಕರ್‌ ಪ್ರಜಾವಾಣಿಯೊಂದಿಗೆ ಮಾತನಾಡಿ,‘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಕೆಲಸ ಮಾಡುತ್ತಿದ್ದೇನೆ. ನಾನು ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಬೇಕು ಎಂಬುದು ಅವರ ತೀರ್ಮಾನ. ಟಿಕೆಟ್‌ ಕೋರಿ ಅರ್ಜಿ ಸಲ್ಲಿಸಿರಲಿಲ್ಲ. ಗಾಯಿತ್ರಿ ಅವರೂ ಅರ್ಜಿ ಹಾಕಿರಲಿಲ್ಲ. ಟಿಕೆಟ್‌ ಘೋಷಣೆಯಾದಾಗ ಸಣ್ಣಪುಟ್ಟ ಅಸಮಾಧಾನ ಉಂಟಾಗುವುದು ಸಹಜ. ವರಿಷ್ಠರು ಎಲ್ಲವನ್ನೂ ಸರಿಪಡಿಸುತ್ತಾರೆ’ ಎಂದು ತಿಳಿಸಿದರು.

ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ: ಸಚಿನ್‌ ಮೀಗಾ

ಶೃಂಗೇರಿ ಕ್ಷೇತ್ರದಲ್ಲಿ ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಕಿಸಾನ್‌ ಘಟಕದ ರಾಜ್ಯಾಧ್ಯಕ್ಷ ಸಚಿನ್‌ ಮೀಗಾ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ನಮ್ಮೊಂದಿಗೆ ಮಾತನಾಡಿದರು. ನಮ್ಮನ್ನು ಕೈಬಿಡುವುದಿಲ್ಲ, ಮುಂದಿನ ದಿನಗಳಲ್ಲಿ ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಪಕ್ಷ ಘೋಷಿಸಿರುವ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry