ಶನಿವಾರ, ಜೂನ್ 6, 2020
27 °C

ವೋಟು ಕುಮಾರಸ್ವಾಮಿ ಜೇಬಿನಲ್ಲಿ ಇಲ್ಲ: ಸಿ.ಎಂ. ಸಿದ್ದರಾಮಯ್ಯ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೋಟು ಕುಮಾರಸ್ವಾಮಿ ಜೇಬಿನಲ್ಲಿ ಇಲ್ಲ: ಸಿ.ಎಂ. ಸಿದ್ದರಾಮಯ್ಯ ತಿರುಗೇಟು

ಮೈಸೂರು: ಚುನಾವಣೆಯಲ್ಲಿ ಸೋಲು ಮತ್ತು ಗೆಲುವನ್ನು ಮತದಾರ ನಿರ್ಧಾರ ಮಾಡುತ್ತಾರೆ. ವೋಟುಗಳು ಎಚ್.ಡಿ.ಕುಮಾರಸ್ವಾಮಿ ಜೇಬಿನಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2ನೇ ಹಂತದ ಪ್ರಚಾರದಲ್ಲಿರುವ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಎಷ್ಟು ಪ್ರಚಾರ ಮಾಡಿದರೂ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಲು ಕುಮಾರಸ್ವಾಮಿ ಯಾರು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಹೇಳಿಕೆ ನೀಡಬಾರದು. ಮೊಯಿಲಿ ವಿರುದ್ಧ ಅವರು ಸೋಲು ಕಂಡಿರಲಿಲ್ಲವೆ’ ಎಂದು ಪ್ರಶ್ನಿಸಿದರು.

2006ರಲ್ಲಿ ನಡೆದ ಉಪ ಚುನಾವಣೆಯ ಸಂದರ್ಭದಲ್ಲಿಯೂ ಕುಮಾರಸ್ವಾಮಿ ನನ್ನ ವಿರುದ್ಧ ಪ್ರಚಾರ ಮಾಡಿದ್ದರು. ಆದರೆ ಗೆದ್ದಿದ್ದು ಮಾತ್ರ ನಾನೇ. ಈಗಲೂ ಇದು ಮರುಕಳಿಸುತ್ತದೆ ಎಂದು ಹೇಳಿದರು.

ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಫರ್ಧೆ ಮಾಡುತ್ತೇನೆ. ಏ.20ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಇಂದಿನಿಂದ ಐದು ದಿನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಲಿಂಗಾಂಬುಧಿ ಪಾಳ್ಯದಿಂದ ಪ್ರಚಾರ ಆರಂಭವಾಗಿದೆ. ಲೋಕೋಪಯೋಗಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹಾಗೂ ಸಂಸದ ಧ್ರುವನಾರಾಯಣ ಸಾಥ್ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.