ಮಂಗಳವಾರ, ಆಗಸ್ಟ್ 11, 2020
21 °C

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಬಿಜೆಪಿ ಮುಖಂಡ ಈಶ್ವರಪ್ಪ, ಕಾಂತೇಶ್‌ಗೆ ನೋಟಿಸ್‌ ಜಾರಿಗೆ ಹೈಕೋರ್ಟ್‌ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಬಿಜೆಪಿ ಮುಖಂಡ ಈಶ್ವರಪ್ಪ, ಕಾಂತೇಶ್‌ಗೆ ನೋಟಿಸ್‌ ಜಾರಿಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಅಕ್ರಮ‌ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮತ್ತು ಅವರ ಪುತ್ರ ಕೆ.ಇ‌.ಕಾಂತೇಶ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಶಿವಮೊಗ್ಗದ ವಕೀಲ ವಿನೋದ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

"ಈಶ್ವರಪ್ಪ ಅವರು 2006ರಿಂದ 2010ರ ವರೆಗೆ ಗಳಿಸಿರುವ ಕೋಟ್ಯಂತರ ಮೌಲ್ಯದ ಅಕ್ರಮ ಸ್ಥಿರ ಮತ್ತು ಚರಾಸ್ತಿ ಸಂಬಂಧ ತನಿಖೆ ನಡೆಸಬೇಕು" ಎಂದು ಕೋರಿ ವಿನೋದ್ 2013ರಲ್ಲಿ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಲೋಕಾಯುಕ್ತ ತನಿಖೆ ಶೇ.70 ಪೂರ್ಣಗೊಂಡ ಸಂದರ್ಭದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಈಶ್ವರಪ್ಪ, "ಪೂರ್ವಾನುಮತಿ ಪಡೆಯದೇ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಇದನ್ನು ವಜಾಗೊಳಿಸಬೇಕು" ಎಂದು ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ್ದ ಹೈಕೋರ್ಟ್, ವಿನೋದ್ ದಾಖಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿತ್ತು.

ಇದನ್ನು ವಿನೋದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆಗ ಹೈಕೋರ್ಟ್ ಮರು ತನಿಖೆಗೆ ಆದೇಶಿಸಿತ್ತು.

ಈ ಮರು ತನಿಖೆ ಆದೇಶವನ್ನು ಮತ್ತೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಈಶ್ವರಪ್ಪ, "ಲೋಕಾಯುಕ್ತ ನ್ಯಾಯಾಲಯ ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಂಡಿಲ್ಲ" ಎಂದು ಆಕ್ಷೇಪಿಸಿದ್ದರು.

"ದೂರುದಾರರ ವೈಯುಕ್ತಿಕ ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಳ್ಳಬೇಕು" ಎಂದು ಲೋಕಾಯುಕ್ತ ನ್ಯಾಯಾಲಯಕ್ಕೆ ನಿರ್ದೇಶಿಸಲಾಗಿತ್ತು.

ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಲೋಕಾಯುಕ್ತ ನ್ಯಾಯಾಲಯ ವಿನೋದ್ ಅವರ ದೂರನ್ನು ವಜಾಗೊಳಿಸಿತ್ತು.

ಇದನ್ನ ಪ್ರಶ್ನಿಸಿ ಮತ್ತೆ ವಕೀಲ ವಿನೋದ್ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.