ಶುಕ್ರವಾರ, ಡಿಸೆಂಬರ್ 6, 2019
25 °C

ಚಿಕ್ಕೋಡಿ: ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ವೇಳೆ ಕಲ್ಲು ತೂರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕೋಡಿ: ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ವೇಳೆ ಕಲ್ಲು ತೂರಾಟ

ಚಿಕ್ಕೋಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ನಿಮಿತ್ತ ತಾಲ್ಲೂಕಿನ ನಾಗರಾಳದಲ್ಲಿ ಸೋಮವಾರ ಸಂಜೆ ನಡೆದ ಮೆರವಣಿಗೆ ವೇಳೆ ದಲಿತ ಮತ್ತು ಮಾಳಿ, ಮರಾಠಾ ಸಮುದಾಯದವರ ಅವರ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯೊಂದರ ಮುಂದೆ ನಿಲ್ಲಿಸಿದ್ದ 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಜಖಂಗೊಂಡಿವೆ. ಹತ್ತಾರು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಬಸ್‌ನಿಲ್ದಾಣದ ಬಳಿ ಇದ್ದ ಡಿಜಿಟಲ್‌ ಬೋರ್ಡ್‌ಗಳನ್ನು ಹರಿದು ಹಾಕಲಾಗಿದೆ.

ಮಾಳಿ ಹಾಗೂ ಮರಾಠಾ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದ ಬೀದಿಯಲ್ಲಿ ಮೆರವಣಿಗೆ ನಡೆಸದಂತೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ದಲಿತರ ಜೊತೆ ವಾಗ್ವಾದ ನಡೆದು, ಕಲ್ಲು ತೂರಾಟ ಆರಂಭವಾಯಿತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೋಭಾ ವಿರೂಪಾಕ್ಷಿ ಜೊಂಡ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅಲ್ಲದೇ, 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳನ್ನು ಜಖಂಗೊಳಿಸಲಾಗಿದೆ. ಗ್ರಾಮದ ಹತ್ತಾರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಹೇಳಿದರು.

ಎಎಸ್‌ಪಿ ರವೀಂದ್ರ ಗಡಾದಿ ಗ್ರಾಮಕ್ಕೆ ಭೇಟಿ ನೀಡಿದರು. ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಂಡಿದ್ದಾರೆ. ಅರೆ ಸೇನಾಪಡೆಯ ಎರಡು ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)