ಟಿಕೆಟ್‌ ವಂಚಿತರು ಜೆಡಿಎಸ್‌ನತ್ತ

7

ಟಿಕೆಟ್‌ ವಂಚಿತರು ಜೆಡಿಎಸ್‌ನತ್ತ

Published:
Updated:

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್‌ ವಂಚಿತ ಕೆಲವು ಮಾಜಿ ಶಾಸಕರು ಜೆಡಿಎಸ್‌ ಬಾಗಿಲು ತಟ್ಟುತ್ತಿದ್ದಾರೆ.

ಬಿಜೆಪಿಯ ಹೇಮಚಂದ್ರಸಾಗರ್‌, ಕಾಂಗ್ರೆಸ್‌ನ ಪ್ರಸನ್ನ ಕುಮಾರ್‌, ಮೊಳಕಾಲ್ಮುರು ಶಾಸಕ ಎಸ್‌.ತಿಪ್ಪೇಸ್ವಾಮಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಜೆಡಿಎಸ್‌ ವರಿಷ್ಠರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾಂತಿನಗರ ಶಾಸಕ ಹ್ಯಾರಿಸ್ ಅವರನ್ನು ಜೆಡಿಎಸ್‌ಗೆ ಕರೆತಂದು ಕಣಕ್ಕಿಳಿಸುವ ಪ್ರಯತ್ನ ಪಕ್ಷದ ಕೆಲವು ನಾಯಕರಿಂದ ನಡೆದಿದೆ. ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್‌ ವಂಚಿತ ಪುಟ್ಟರಾಜು, ಯಲಹಂಕ ಕ್ಷೇತ್ರದ ಟಿಕೆಟ್‌ ಬಯಸಿದ್ದ ಕಾಂಗ್ರೆಸ್‌ನ ಕೇಶವ ರಾಜಣ್ಣ ಜೆಡಿಎಸ್‌ ಟಿಕೆಟ್‌ನಿಂದ ಕಣಕ್ಕಿಳಿಯುವ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry