ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಮನೆ ಮೇಲೆ ದಾಳಿ ಮಾಡಿದವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಟ್ವಿಟರ್‌ನಲ್ಲಿ ಪ್ರಕಟಿಸಿ, ಬಂಧನಕ್ಕೆ ಒಳಗಾಗಿದ್ದ ಯುವಕನನ್ನು ಗೆಹ್ಲೋಟ್ ಅವರ ಮನವಿ ಮೇರೆಗೆ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಗೆಹ್ಲೋಟ್ ಅವರನ್ನು ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ ಮತ್ತು ಬೆದರಿಕೆಯೊಡ್ಡಿದ ಆರೋಪದಡಿ ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯ ವಾಣಿಜ್ಯ ಪದವಿ ವಿದ್ಯಾರ್ಥಿ, 24 ವರ್ಷದ ಪ್ರಭಾಕರ್ ಪಾಂಡೆ ಅವರನ್ನು ಪೊಲೀಸರು ಬಂಧಿಸಿದ್ದರು.

‘ಸೆಕ್ಷನ್ 153, 505, 506 ಮತ್ತು 507ರ ಅಡಿ ಪಾಂಡೆಯನ್ನು ಭಾನುವಾರ ಬಂಧಿಸಲಾಗಿತ್ತು. ಸೋಮವಾರ ಅವರನ್ನು ಬಿಡುಗಡೆ ಮಾಡಲಾಯಿತು’ ಎಂದು ಠಾಣಾಧಿಕಾರಿ ಸುನಿಲ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.

‘ಆ ವ್ಯಕ್ತಿ ಇನ್ನೂ ಪದವಿ ವಿದ್ಯಾರ್ಥಿಯಾಗಿದ್ದು, ಅವರ ಭವಿಷ್ಯದ ದೃಷ್ಟಿಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಅವರ ಭವಿಷ್ಯ ಹಾಳು ಮಾಡಲು ನಾನು ಇಚ್ಛಿಸುವುದಿಲ್ಲ’ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.