ಉತ್ತರ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಭಾನುವಾರ, ಮಾರ್ಚ್ 24, 2019
33 °C

ಉತ್ತರ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ

Published:
Updated:
ಉತ್ತರ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಇತಾಹ್‌: ಸದ್ಯ ದೇಶದಾದ್ಯಂತ ಆತಂಕ ಸೃಷ್ಟಿಸಿರುವ ಕಠುವಾ ಅತ್ಯಾಚಾರ ಪ್ರಕರಣದ ಬಿಸಿ ತಣ್ಣಗಾಗುವ ಮುನ್ನ ಅಂತಹದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಇಲ್ಲಿನ ಕೊತ್ವಾಲಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಶೀತಾಲ್ಪುರ್‌ ಪ್ರದೇಶದ ಮಂಡಿ ಸಮಿತಿಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಬಂದಿದ್ದ ಬಾಲಕಿಗೆ ಆಮಿಷ ಒಡ್ಡಿ ಭಾನುವಾರ ಅಪಹರಿಸಿ ಕೃತ್ಯವೆಸಗಲಾಗಿತ್ತು. ಆಕೆಯ ಶವವನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದರು.

‘ಪ್ರಕರಣದ ಆರೋಪಿ ಸೋನು ಎಂಬಾತನನ್ನು ಬಂಧಿಸಲಾಗಿದೆ. ಮುಂಜಾಗ್ರತೆಯಾಗಿ ಘಟನಾ ಸ್ಥಳದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ’ ಎಂದು ಎಸ್‌ಎಸ್‌ಪಿ (ಹಿರಿಯ ಸೂಪರಿಂಟೆಂಡೆಂಟ್ ಆಫ್‌ ಪೊಲೀಸ್‌) ಅಖಿಲೇಶ್‌ ಕುಮಾರ್‌ ಚೌರಾಸಿಯಾ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry