ಚಿಕ್ಕಮಗಳೂರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

7
ಗಾಯತ್ರಿ ಶಾಂತೇಗೌಡರಿಗೆ ಕೈತಪ್ಪಿದ ಟಿಕೆಟ್‌

ಚಿಕ್ಕಮಗಳೂರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

Published:
Updated:

ಚಿಕ್ಕಮಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಅವರಿಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ಅವರ ಬೆಂಬಲಿಗರು ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಕುರ್ಚಿಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯ ಬಾಗಿಲು ಬಂದ್ ಮಾಡಿ ಕೆಲಹೊತ್ತು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವಿಷಯ ತಿಳಿದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಕಚೇರಿಗೆ ಧಾವಿಸುತ್ತಿದ್ದಂತೆ, ಪ್ರತಿಭಟನಕಾರರೂ ಒಳಕ್ಕೆ ನುಗ್ಗಿದರು. ಹೈಕಮಾಂಡ್‌ ತನ್ನ ನಿರ್ಧಾರವನ್ನು ಪರಿಶೀಲಿಸಿ, ಗಾಯತ್ರಿ ಅವರಿಗೆ ಟಿಕೆಟ್ ನೀಡಲೇಬೇಕು ಎಂದು ಬೆಂಬಲಿಗರು ಪಟ್ಟು ಹಿಡಿದರು. ವಿಜಯಕುಮಾರ್ ಅವರಿಗೆ ಘೇರಾವ್ ಹಾಕಿದರು.

ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಬಿ.ಎಲ್‌. ಶಂಕರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮೆರವಣಿಗೆ: ನಗರದ ಆಜಾದ್ ಪಾರ್ಕ್ ವೃತ್ತದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಚೇರಿ ಬಾಗಿಲು ಬಂದ್ ಮಾಡಿ ಕೆಲಹೊತ್ತು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವಿಷಯ ತಿಳಿದು ಕಾಂಗ್ರೆಸ್‌ ಜಿಲ್ಲಾಘಟಕದ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಕಚೇರಿಗೆ ಧಾವಿಸುತ್ತಿದ್ದಂತೆ, ಪ್ರತಿಭನಟಕಾರರೂ ಒಳಕ್ಕೆ ನುಗ್ಗಿದರು.

ಹೈಕಮಾಂಡ್‌ ತನ್ನ ನಿರ್ಧಾರವನ್ನು ಪರಿಶೀಲಿಸಿ, ಗಾಯತ್ರಿ ಅವರಿಗೆ ಟಿಕೆಟ್ ನೀಡಲೇಬೇಕು ಎಂದು ಬೆಂಬಲಿಗರು ಪಟ್ಟು ಹಿಡಿದರು.ವಿಜಯಕುಮಾರ್ ಅವರಿಗೆ ಘೇರಾವ್ ಹಾಕಿದರು.

ಕಚೇರಿಯಲ್ಲಿ ಅಳವಡಿಸಿದ್ದ ಅಧ್ಯಕ್ಷರ ನಾಮಫಲಕ ಕಿತ್ತು ರಸ್ತೆಗೆ ಬಿಸಾಡಿದರು. ಕುರ್ಚಿಗಳನ್ನು ಚೆಲ್ಲಾಪಿಲ್ಲಿ ಮಾಡಿದರು. ಕೆಲ ಕುರ್ಚಿಗಳನ್ನು ಮುರಿದು ಹಾಕಿದರು.

‘ನಾವೆಲ್ಲರೂ ಕುಟುಂಬದ ಸದಸ್ಯರು ಇದ್ದಂತೆ. ಅಹವಾಲು ನೀಡಿದರೆ ಪಕ್ಷದ ಹೈಕಮಾಂಡ್‌ಗೆ ರವಾನಿಸಲಾಗುವುದು’ ಎಂದು ವಿಜಯಕುಮಾರ್ ಹೇಳಿದರು. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

ಕಾಂಗ್ರೆಸ್‌ ಮುಖಂಡ ಹಿರೇಮಗಳೂರು ಪುಟ್ಟಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗಾಯತ್ರಿ ಶಾಂತೇಗೌಡ ಅವರು ಬಹಳ ವರ್ಷದಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯೂ ಜನರೊಂದಿಗೆ ಸಂಪರ್ಕ ಹೊಂದಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಅವರಿಗೆ ಟಿಕೆಟ್ ತಪ್ಪಿರುವುದರಿಂದ ಅಭಿಮಾನಿಗಳು ಸಿಡಿದೆದಿದ್ದಾರೆ. ನಿರ್ಧಾರವನ್ನು ಹೈಕಮಾಂಡ್‌ ಮರುಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.ಪಕ್ಷದ ಚೌಕಟ್ಟು ಮೀರಿದರೆ ಶಿಸ್ತಿನ ಕ್ರಮ ಪಕ್ಷದ ಜಿಲ್ಲಾಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಪ್ರಜಾವಾಣಿಯೊಂದಿಗೆ ಮಾತನಾಡಿ, ‘ಬ್ಲಾಕ್‌ಮೇಲ್‌ ಮತ್ತು ಒತ್ತಡ ತಂತ್ರಕ್ಕೆ ಪಕ್ಷ ಮಣಿಯುವುದಿಲ್ಲ. ವ್ಯಕ್ತಿಗಿಂತ ಪಕ್ಷ ಮುಖ್ಯ. ಹೈಕಮಾಂಡ್‌ ಸೂಚನೆಯನ್ನು ಎಲ್ಲರೂ ಪಾಲಿಸಬೇಕು. ವ್ಯಕ್ತಿ ಎಷ್ಟೇ ಪ್ರಭಾವಿತರಾಗಿದ್ದರೂ, ಪಕ್ಷದ ಚೌಕಟ್ಟು ಮೀರಿದರೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry