ಗುರುವಾರ , ಡಿಸೆಂಬರ್ 12, 2019
20 °C

ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಿಥುನ್ ರೈ ಅವರಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ರಾಜೀನಾಮೆ ಪತ್ರಗಳನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ‌ ವಿಷಯ ಪ್ರಕಟಿಸಿದರು.

'ಯುವ ಕಾಂಗ್ರೆಸ್ ಮುಖಂಡರಿಗೆ ಅವಕಾಶ ನೀಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಮಿಥುನ್ ಅವರಿಗೆ ಕ್ಷೇತ್ರ ಬಿಟ್ಟುಕೊಡುವುದಾಗಿ ಶಾಸಕ ಅಭಯಚಂದ್ರ ಜೈನ್ ಭರವಸೆ ನೀಡಿದ್ದರು. ಆದರೆ, ಹೈಕಮಾಂಡ್ ಅವಕಾಶ ನಿರಾಕರಿಸಿದೆ. ಈ ಬೆಳವಣಿಗೆಯಿಂದ ಬೇಸತ್ತು ರಾಜೀನಾಮೆ ನೀಡಿದ್ದೇವೆ' ಎಂದರು.

ಹೈಕಮಾಂಡ್ ಅಥವಾ ಯಾವುದೇ ನಾಯಕರ ವಿರುದ್ಧ ತಾವು ಇಲ್ಲ. ಮಿಥುನ್ ಅವರಿಗೆ ಸೂಕ್ತ ಅವಕಾಶ ನೀಡಬೇಕು ಎಂಬುದೇ ತಮ್ಮ ಬೇಡಿಕೆ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)