ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಿದ ಸಲ್ಮಾನ್‌ ಖಾನ್‌

7

ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಿದ ಸಲ್ಮಾನ್‌ ಖಾನ್‌

Published:
Updated:
ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಿದ ಸಲ್ಮಾನ್‌ ಖಾನ್‌

ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಜಾಮೀನಿನ ಮೇಲೆ ಹೊರಬಂದಿರುವ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌, ಇದೀಗ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಜೋಧಪುರ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

1998ರಲ್ಲಿ ರಾಜಸ್ಥಾನದ ಜೋಧಪುರ ಸಮೀಪದ ಹಳ್ಳಿಯಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದ ಜೋಧಪುರ ನ್ಯಾಯಾಲಯ ಸಲ್ಮಾನ್‌ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ಎರಡು ದಿನಗಳ ಕಾಲ ಜೈಲಿನಲ್ಲಿದ್ದ ಸಲ್ಮಾನ್‌ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು.

ನ್ಯಾಯಾಲಯ ಜಾಮೀನು ಮಂಜೂರು ಮಾಡುವ ವೇಳೆ ವಿದೇಶ ಪ್ರವಾಸ ಕೈಗೊಳ್ಳಬೇಕೆಂದರೆ ನ್ಯಾಯಾಲಯದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಸಲ್ಮಾನ್‌ಗೆ ಷರತ್ತು ವಿಧಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry