ಭಾನುವಾರ, ಡಿಸೆಂಬರ್ 15, 2019
25 °C

ಬೆಳಗಾವಿ: ಶಾಸಕ ಸಂಜಯ ಪಾಟೀಲ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು– ಲಕ್ಷ್ಮಿ ಹೆಬ್ಬಾಳಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಶಾಸಕ ಸಂಜಯ ಪಾಟೀಲ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು– ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಕಾಂಗ್ರೆಸ್‌ ಮುಸ್ಲಿಂ ಪಕ್ಷ. ಇದಕ್ಕೆ ಮತ ಹಾಕಿದರೆ ಟಿಪ್ಪು ಸುಲ್ತಾನ್‌ಗೆ ಹಾಕಿದಂತೆ. ಹಿಂದೂಗಳ ಪಕ್ಷವಾಗಿರುವ ಬಿಜೆಪಿಗೆ ಮತ ಹಾಕಿ ಎಂದು ಧರ್ಮದ ಹೆಸರಿನಲ್ಲಿ ಪ್ರಚಾರ ನಡೆಸುತ್ತಿರುವ ಶಾಸಕ ಸಂಜಯ ಪಾಟೀಲ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಜಾತಿ, ಧರ್ಮದ ಹೆಸರಿನಲ್ಲಿ ಚುನಾವಣಾ ಪ್ರಚಾರ ಮಾಡುವುದು ಮಾದರಿ ನೀತಿ ಸಂಹಿತೆ ವಿರುದ್ಧವಾಗಿದೆ. ಅವರು ಮಾತನಾಡಿರುವ ವಿಡಿಯೊ ನನ್ನ ಬಳಿಯಿದೆ. ದೂರಿನ ಜೊತೆ ಇದನ್ನು ಆಯೋಗಕ್ಕೆ ಸಲ್ಲಿಸುತ್ತೇನೆ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದೆ. ಆದರೂ, ಕ್ಷೇತ್ರವನ್ನು ಬಿಟ್ಟಿಲ್ಲ. ಅಂದಿನಿಂದ ಇಂದಿನವರೆಗೂ ಕ್ಷೇತ್ರದ ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕ್ಷೇತ್ರ ಜನರಿಗೆ ಕೈ ಮುಗಿದು ನಾವು ಮತ ಕೇಳುತ್ತಿದ್ದೇವೆ. ಆದರೆ ಶಾಸಕರು ಈ ರೀತಿ ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ’ ಎಂದು ಆರೋಪಿಸಿದರು.

ಪ್ರತಿಕ್ರಿಯಿಸಿ (+)