ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಡ್ಯ ಪರಿಣಾಮ ಉಮೇದುವಾರಿಕೆ ಸಲ್ಲಿಕೆಗೆ ನಾಯಕರ ಹಿಂದೇಟು

Last Updated 17 ಏಪ್ರಿಲ್ 2018, 14:07 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮೊದಲ ದಿನ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎನ್.ಈಶ್ವರಪ್ಪ, ಶಿಡ್ಲಘಟ್ಟದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಂಜಿನಪ್ಪ ಹಾಗೂ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷದಿಂದ ವಿ.ಸಿ.ಸಚ್ಚಿದಾನಂದಮೂರ್ತಿ ಅವರು ನಾಮಪತ್ರ ಸಲ್ಲಿಸಿದರು. ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿಯಲ್ಲಿ ಒಂದೇ ಒಂದು ನಾಮಪತ್ರ ಸಲ್ಲಿಕೆ ಆಗಲಿಲ್ಲ.

ಸೋಮವಾರ ಅಮವಾಸ್ಯೆ, ಮಂಗಳವಾರ ಪಾಡ್ಯ ಇದ್ದ ಕಾರಣಕ್ಕೆ ಬಹುತೇಕರು ನಾಮಪತ್ರ ಸಲ್ಲಿಸುವುದು ಒಳ್ಳೆಯದಲ್ಲ ಎಂದು ಮತ್ತೊಂದು ದಿನಕ್ಕೆ ಮುಹೂರ್ತ ಹುಡುಕಿ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಬುಧವಾರ ಬಸವ ಜಯಂತಿ ಸಾರ್ವತ್ರಿಕ ರಜೆ ಕಾರಣಕ್ಕೆ ಚುನಾವಣಾ ಕಾರ್ಯಾಲಯಗಳು ಕಾರ್ಯ ನಿರ್ವಹಿಸುವುದಿಲ್ಲ. ಹೀಗಾಗಿ ಏ.19 ರಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಚುರುಕು ಕಾಣುವ ಸಾಧ್ಯತೆಗಳಿವೆ.

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‌ಗೆ ‘ಬಂಡಾಯ’ದ ಬಿಸಿ
ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ (ಪುಟ್ಟು) ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್‌ ಹೈಕಮಾಂಡ್ ಮಾಜಿ ಸಚಿವ ವಿ.ಮುನಿಯಪ್ಪ ಅವರಿಗೆ ಟಿಕೆಟ್‌ ನೀಡುತ್ತಿದ್ದಂತೆ ಮುನಿಸಿಕೊಂಡ ಆಂಜಿನಪ್ಪ ಇದೀಗ ಸ್ವಪಕ್ಷದ ನಾಯಕನ ವಿರುದ್ಧವೇ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆಂಜಿನಪ್ಪ, ‘ನಾನು ಈಗಾಗಲೇ ಕ್ಷೇತ್ರದಾದ್ಯಂತ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಜನಸೇವೆ ಮಾಡುತ್ತ ಬಂದಿದ್ದೇನೆ. ಮುಂದಿನ ದಿನಗಳಲ್ಲಿಯೂ ಕೂಡಾ ಉತ್ತಮ ಸೇವೆ ಮಾಡುವ ಜತೆಗೆ ಮೂಲ ಸೌಕರ್ಯಗಳ ಕಡೆಗೆ ಗಮನ ನೀಡುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಈ ಬಾರಿ ಕ್ಷೇತ್ರದ ಜನತೆ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT