ಕಾವೇರಿ: ಸ್ಪಷ್ಟನೆ ಕೋರಿರುವ ಅರ್ಜಿ ವಾಪಸ್‌ ಪಡೆಯಲು ಡಿಎಂಕೆ ಒತ್ತಾಯ

ಬುಧವಾರ, ಮಾರ್ಚ್ 20, 2019
31 °C

ಕಾವೇರಿ: ಸ್ಪಷ್ಟನೆ ಕೋರಿರುವ ಅರ್ಜಿ ವಾಪಸ್‌ ಪಡೆಯಲು ಡಿಎಂಕೆ ಒತ್ತಾಯ

Published:
Updated:
ಕಾವೇರಿ: ಸ್ಪಷ್ಟನೆ ಕೋರಿರುವ ಅರ್ಜಿ ವಾಪಸ್‌ ಪಡೆಯಲು ಡಿಎಂಕೆ ಒತ್ತಾಯ

ಚೆನ್ನೈ: ಕಾವೇರಿ ವಿವಾದದ ಬಗ್ಗೆ ಸ್ಪಷ್ಟನೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಹಿಂದಕ್ಕೆ ಪಡೆದು, ಸುಪ್ರೀಂ ಕೋರ್ಟ್‌ ತೀರ್ಪಿನಂತೆ ಕೂಡಲೇ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಡಿಎಂಕೆ ಒತ್ತಾಯಿಸಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್‌, ‘ಪ್ರತಿಪಕ್ಷದ ನಾಯಕರ ನಿಯೋಗದೊಂದಿಗೆ ತಮ್ಮನ್ನು ಭೇಟಿಯಾಗಲು ಸಮಯ ನಿಗದಿಪಡಿಸಬೇಕು. ಅಲ್ಲದೆ ತಾವು ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

‘ಸ್ಪಷ್ಟನೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಹಿಂದಕ್ಕೆ ಪಡೆಯಲು ಕೇಂದ್ರದ ಜಲಸಂಪನ್ಮೂಲ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು. ಸಂಕಷ್ಟದಲ್ಲಿರುವ ರಾಜ್ಯದ ರೈತರ ಸಮಸ್ಯೆಗೆ ಕೂಡಲೇ ಪರಿಹಾರ ಒದಗಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry