‘ರಾಷ್ಟ್ರೀಯ ತುರ್ತು ಪರಿಸ್ಥಿತಿ’

7

‘ರಾಷ್ಟ್ರೀಯ ತುರ್ತು ಪರಿಸ್ಥಿತಿ’

Published:
Updated:

ಚೆನ್ನೈ: ‘ದೇಶದಲ್ಲಿ ಪ್ರತಿದಿನ ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದ್ದು, ಇದು ರಾಷ್ಟ್ರೀಯ ತುರ್ತುಪರಿಸ್ಥಿತಿ’ ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಕಳವಳ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ದತ್ತಾಂಶ ವರದಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ.

ಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಸಂಬಂಧಿಸಿದ 1 ಲಕ್ಷಕ್ಕೂ ಅಧಿಕ ಪ್ರಕರಣಗಳು ದೇಶದ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿವೆ. 2016ರಲ್ಲಿ 18,862 ಪ್ರಕರಣಗಳು ದಾಖಲಾಗಿವೆ. ಅದೊಂದೇ ವರ್ಷದಲ್ಲಿ ಪ್ರತಿದಿನ 50 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry