ಮಂಗಳವಾರ, ಡಿಸೆಂಬರ್ 10, 2019
26 °C
ರಾಜ್ಯಮಟ್ಟದ ಅಂತರ ವಲಯ ಬಾಲ್‌ ಬ್ಯಾಡ್ಮಿಂಟನ್‌ ಟೂರ್ನಿ

ಆಳ್ವಾಸ್‌ ಕಾಲೇಜು ತಂಡಗಳಿಗೆ ಪ್ರಶಸ್ತಿ

Published:
Updated:
ಆಳ್ವಾಸ್‌ ಕಾಲೇಜು ತಂಡಗಳಿಗೆ ಪ್ರಶಸ್ತಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜು ಪುರುಷರ ಮತ್ತು ಮಹಿಳೆಯರ ತಂಡದವರು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಮತ್ತು ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಂತರ ವಲಯ ಬಾಲ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಮಂಗಳವಾರ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್‌ ತಂಡ 35–26, 35–37, 35–32ರಿಂದ ಆತಿಥೇಯ ಮಲೆನಾಡು ಕಾಲೇಜು ತಂಡವನ್ನು ಪರಾಭವಗೊಳಿಸಿತು.

ಮೊದಲ ಸೆಟ್‌ನಲ್ಲಿ ಮಿಂಚಿನ ಆಟ ಆಡಿ ಎದುರಾಳಿಗಳ ಸವಾಲು ಮೀರಿದ ಆಳ್ವಾಸ್‌ ತಂಡದವರು 1–0ಯಿಂದ ಮುನ್ನಡೆ ಗಳಿಸಿದರು. ಎರಡನೆ ಸೆಟ್‌ನಲ್ಲಿ ಗುಣಮಟ್ಟದ ಆಟ ಆಡಿದ ಮಲೆನಾಡು ಕಾಲೇಜು ತಂಡ ಸೆಟ್‌ ಜಯಿಸಿ 1–1ಯಿಂದ ಸಮಬಲ ಸಾಧಿಸಿತು. ನಿರ್ಣಾಯಕ ಎನಿಸಿದ್ದ ಮೂರನೆ ಸೆಟ್‌ನ ಆರಂಭದಿಂದಲೇ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು. ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಚ್ಚೆದೆಯಿಂದ ಹೋರಾಡಿದ ಆಳ್ವಾಸ್‌ ಆಟಗಾರರು ಸಂಭ್ರಮದ ಹೊಳೆಯಲ್ಲಿ ಮಿಂದೆದ್ದರು.

ಮಹಿಳೆಯರ ವಿಭಾಗದ ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಆಳ್ವಾಸ್‌ ತಂಡ 35–33, 39–37ರ ನೇರ ಸೆಟ್‌ಗಳಿಂದ ಮೈಸೂರಿನ ಜಿಎಸ್‌ಎಸ್‌ಎಸ್‌ ಕಾಲೇಜಿನ ವಿರುದ್ಧ ಗೆದ್ದಿತು.

ಪ್ರತಿಕ್ರಿಯಿಸಿ (+)