ಸೋಮವಾರ, ಡಿಸೆಂಬರ್ 9, 2019
25 °C

ರೋಹಿಣಿ ಸಿಂಧೂರಿ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು: ತಮ್ಮ ವರ್ಗಾವಣೆ ಆದೇಶ ಪ್ರಶ್ನಿಸಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅರ್ಜಿಯನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ವಜಾ ಮಾಡಿದೆ.

ಈ ಕುರಿತ ಅರ್ಜಿಯನ್ನು ಆಡಳಿತ ಮಂಡಳಿ ಸದಸ್ಯ ಪಿ.ಕೆ.ಪ್ರಧಾನ್‌ ಮತ್ತು ನ್ಯಾಯಾಂಗ ಸದಸ್ಯ ಡಾ.ಕೆ.ಬಿ ಸುರೇಶ್‌ ವಿಚಾರಣೆ ನಡೆಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್, ’ಸರ್ಕಾರ ಉದ್ದೇಶ ಪೂರ್ವಕವಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಿದೆ’ ಎಂದರು.

ಇದನ್ನು ಆಕ್ಷೇಪಿಸಿದ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್‌.ಪೊನ್ನಣ್ಣ, ’ಸರ್ಕಾರವು ಆಡಳಿತ ನಿರ್ವಹಣೆ ದೃಷ್ಟಿಯಿಂದ ವರ್ಗಾವಣೆ ಮಾಡಿದೆ. ಇದನ್ನು ಅಧಿಕಾರಿಗಳು ಪ್ರಶ್ನೆ ಮಾಡುವುದು ಅಥವಾ ನಾನು ಇಲ್ಲೇ ಮುಂದುವರೆಯುತ್ತೇನೆ ಎಂದು ಹೇಳುವುದು ಕಾನೂನಿಗೆ ವಿರುದ್ಧವಾದುದು. ಆದ್ದರಿಂದ ಅರ್ಜಿ ವಜಾ ಮಾಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ಸಿಎಟಿ, ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಆದೇಶವನ್ನು ಎತ್ತಿ ಹಿಡಿದಿದೆ.

ಹೈಕೋರ್ಟ್‌ಗೆ ಅರ್ಜಿ: ‘ಆದೇಶದ ಪ್ರತಿ ಕೈಸೇರಿದ ಕೂಡಲೇ ಇದನ್ನು ಹೈಕೋರ್ಟ್‌ನ‌ಲ್ಲಿ ಪ್ರಶ್ನಿಸಲಾಗುವುದು. ಇದೇ 19ರಂದು ರಿಟ್ ಅರ್ಜಿ ಸಲ್ಲಿಸಲಾಗುವುದು’ ಎಂದು ಸುಬ್ರಹ್ಮಣ್ಯ ಜೋಯಿಸ್ 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)