‘ಶೋಭಾ ಮೌನ ಏಕೆ’

ಬುಧವಾರ, ಮಾರ್ಚ್ 20, 2019
31 °C

‘ಶೋಭಾ ಮೌನ ಏಕೆ’

Published:
Updated:
‘ಶೋಭಾ ಮೌನ ಏಕೆ’

ಬೆಳಗಾವಿ: ‘ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಹಾಗೂ ಜಮ್ಮು– ಕಾಶ್ಮೀರದಲ್ಲಿ ನಡೆದ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಏಕೆ ಏನೂ ಮಾತನಾಡುತ್ತಿಲ್ಲ. ಯಾವ ಕಾರಣಕ್ಕೆ ಈ ಮೌನ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಪ್ರಶ್ನಿಸಿದರು.

‘ಇವೆರಡೂ ಪ್ರಕರಣಗಳಲ್ಲಿ ಬಿಜೆಪಿ ಮುಖಂಡರ ಹೆಸರು ಕೇಳಿಬಂದಿದೆ. ಒಬ್ಬ ಮಹಿಳೆಯಾಗಿ ಪ್ರತಿಕ್ರಿಯೆ ನೀಡ

ಬೇಕಾಗಿತ್ತು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಸಾಮಾನ್ಯವಾಗಿ ಎಲ್ಲ ವಿಚಾರಗಳಲ್ಲಿಯೂ ಶೋಭಾ ಪ್ರತಿಕ್ರಿಯೆ ನೀಡುತ್ತಿದ್ದರು. ಆದರೆ, ಈ ವಿಚಾರದಲ್ಲಿ ಮೌನ ವಹಿಸಿರುವುದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry