7

ಅನಂತ ಕುಮಾರ ಹೆಗಡೆ ಅವರನ್ನು ರಾಜಕೀಯವಾಗಿ ಎದುರಿಸಿ: ಸಿಎಂಗೆ ಪ್ರತಾಪ್ ಸಿಂಹ ಸವಾಲು

Published:
Updated:
ಅನಂತ ಕುಮಾರ ಹೆಗಡೆ ಅವರನ್ನು ರಾಜಕೀಯವಾಗಿ ಎದುರಿಸಿ: ಸಿಎಂಗೆ ಪ್ರತಾಪ್ ಸಿಂಹ ಸವಾಲು

ಬೆಂಗಳೂರು: ಮುಖ್ಯಮಂತ್ರಿಗಳೇ, ನಿಮಗೆ ತಾಕತ್ತಿದ್ದರೆ ಅನಂತ ಕುಮಾರ ಹೆಗಡೆ ಅವರನ್ನು ರಾಜಕೀಯವಾಗಿ ಎದುರಿಸಿ. ಅದನ್ನು ಬಿಟ್ಟು ಈ ರೀತಿಯ ಪ್ರಯತ್ನ ಮಾಡಿದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಆಗ ನಿಮ್ಮನ್ನು ಯಾರೂ ಕಾಪಾಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿದ್ದಾರೆ.

ಮಂಗಳವಾರ ರಾತ್ರಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಅವರ ಕಾರಿಗೆ ಲಾರಿಯೊಂದು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಯಲು ಬಂದ ಘಟನೆ ಬಗ್ಗೆ ಪ್ರತಾಪ್ ಸಿಂಹ ಈ ರೀತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಏನಿದು ಪ್ರಕರಣ?
ಮಂಗಳವಾರ ರಾತ್ರಿ 11.30ಕ್ಕೆ  ಹಾವೇರಿ‌ ಜಿಲ್ಲೆ ರಾಣಿಬೆನ್ನೂರು ಹಲಗೇರಿ ಸಮೀಪ ಅನಂತಕುಮಾರ ಹೆಗಡೆಯವರ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆಯಲು ಯತ್ನಿಸಿತ್ತು. ಆದರೆ ಗುರಿ ತಪ್ಪಿದ ಲಾರಿ ಸಚಿವ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದೊಂದು ಅಪಘಾತ ಅಲ್ಲ, ತನ್ನ ಪ್ರಾಣಕ್ಕೆ ಹಾನಿಯುಂಟು ಮಾಡಲು ನಡೆಸಿದ ಯತ್ನ ಎಂದು ಸಚಿವರು ಟ್ವೀಟ್ ಮಾಡಿದ್ದರು,

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry