ಭಾನುವಾರ, ಡಿಸೆಂಬರ್ 15, 2019
19 °C

ಬೆಳಗಾವಿಯಲ್ಲಿ ₹7 ಕೋಟಿ ನಕಲಿ ನೋಟು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿಯಲ್ಲಿ ₹7 ಕೋಟಿ ನಕಲಿ ನೋಟು ವಶ

ಬೆಳಗಾವಿ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಬೆಳಗಾವಿಯಲ್ಲಿ ಪೊಲೀಸರು ₹ 7 ಕೋಟಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಪೊಲೀಸರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಪಾಳು ಬಿದ್ದ ಲೋಕೋಪಯೋಗಿ ವಸತಿ ಗೃಹದಲ್ಲಿ ಸಂಗ್ರಹಿಸಿದ್ದ ₹ 500 ಹಾಗೂ ₹ 2000 ಮುಖಬೆಲೆಯ ಮಾದರಿಯ ನಕಲಿ ನೋಟುಗಳನ್ನು ಬುಧವಾರ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವಿಜಯಪುರದ ಅಜಿತಕುಮಾರ ನಿಡೋಣಿ ಎನ್ನುವವರನ್ನು ಬಂಧಿಸಿದ್ದಾರೆ.

ಚುನಾವಣೆ ವೇಳೆ ಮತದಾರರಿಗೆ ಅಮಿಷ ಒಡ್ಡಲು ನಕಲಿ ನೋಟುಗಳನ್ನು ಮುದ್ರಿಸಿ, ಸಂಗ್ರಹಿಸಲಾಗಿತ್ತು ಎನ್ನಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಎಪಿಎಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರತಿಕ್ರಿಯಿಸಿ (+)