‘ಶೃಂಗೇರಿಯಲ್ಲಿ ಕಾಂಗ್ರೆಸ್ ಪರ ಅಲೆ’

7
ಕಾನೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ

‘ಶೃಂಗೇರಿಯಲ್ಲಿ ಕಾಂಗ್ರೆಸ್ ಪರ ಅಲೆ’

Published:
Updated:

ಕಾನೂರು (ಎನ್. ಆರ್.ಪುರ): ಶೃಂಗೇರಿ ಕ್ಷೇತ್ರದ್ಯಾಂತ ಕಾಂಗ್ರೆಸ್ ಪರವಾದ ಅಲೆಯಿದೆ ಎಂದು ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಶೆಟ್ಟಿ ಅವರಿಗೆ ಕಾಂಗ್ರೆಸ್‌ಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆ ದಿದ್ದು, ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾ ಸನೆಗಳನ್ನು ಈಡೇರಿಸುವ ಮೂಲಕ 5 ವರ್ಷಗಳಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಪ್ರಾಮಾಣಿಕ ಆಡಳಿತ ನೀಡಿದೆ’ ಎಂದರು.

‘ಎಲ್ಲ ಜನಾಂಗದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗಲು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸ ಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಸದಾ ಶಿವ ಮಾತನಾಡಿ, ‘ಕಾಂಗ್ರೆಸ್ ಕ್ಷೇತ್ರದಲ್ಲಿ ಸದೃಢವಾಗಿದ್ದು, ಈ ಬಾರಿ ಪಕ್ಷದ ಅಭ್ಯರ್ಥಿ ರಾಜೇಗೌಡರ ಗೆಲುವು ಸಾಧಿಸಲಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉತ್ತಮ ಕೆಲಸ ಮಾಡಿ ರುವ ವಸಂತಿ ಶೆಟ್ಟಿ ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲ ತಂದಿದೆ’ ಎಂದರು.

ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಕೆ ಎಂ.ಗಂಗಾಧರ್ ಮಾತನಾಡಿದರು. ಬಾಳೆಹೊನ್ನೂರು ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹ್ಮಮದ್ ಅನೀಫ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಾಗೇಶ್, ಕೆ.ಎಂ.ಸುಂದರೇಶ್, ವೆಂಕಟೇಶ್ ಇದ್ದರು. ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಶೆಟ್ಟಿ ಸೇರಿದಂತೆ ಅನೇಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry