ಮಂಗಳವಾರ, ಡಿಸೆಂಬರ್ 10, 2019
26 °C
ಜಮ್ಮುವಿನ ಕಠುವಾದಲ್ಲಿ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ

ಅತ್ಯಾಚಾರ: ಪುಟ್ಟ ಮಕ್ಕಳೊಂದಿಗೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅತ್ಯಾಚಾರ: ಪುಟ್ಟ ಮಕ್ಕಳೊಂದಿಗೆ ಪ್ರತಿಭಟನೆ

ಭಟ್ಕಳ: ಜಮ್ಮುವಿನ ಕಠುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಭಟ್ಕಳದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು ಪುಟ್ಟ ಮಕ್ಕಳೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಮಂದಿರದಲ್ಲಿ ಬಾಲಕಿಯನ್ನು 8 ದಿನ ವಶದಲ್ಲಿಟ್ಟುಕೊಂಡು ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವುದು ಅಮಾನವೀಯ ಕೃತ್ಯ. ಇದರಲ್ಲಿ ಬಿಜೆಪಿ ಮಂತ್ರಿಗಳು ಮತ್ತು ಪೊಲೀಸರ ಕೈವಾಡವಿದ್ದು, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಇಂಥಹ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಘಟನೆಯ ಪ್ರಮುಖರಾದ ಇನಾಯತ್ಉಲ್ಲಾ, ನಜೀರ್ ಕಾಶೀಂಜಿ ಸೇರಿ ಹಲವರು ಹಾಜರಿದ್ದರು.

ಅನುಮತಿ ಇಲ್ಲದೇ ಪ್ರತಿಭಟನೆ

ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಮನವಿ ನೀಡಲು ಚುನಾವಣಾಧಿಕಾರಿ ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯ. ಆದರೆ ಕ್ಯಾಂಪಸ್ ಫ್ರಂಟ್ ಇಂಡಿಯಾ ಸಂಘಟನೆ ಸದಸ್ಯರು ಯಾವುದೇ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದರಿಂದ, ಚುನಾವಣಾಧಿಕಾರಿಗಳು ಪ್ರತಿಭಟನೆಯ ಸಂಪೂರ್ಣ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅನುಮತಿ ಬಗ್ಗೆ ಪೊಲೀಸ್ ಇಲಾಖೆಯೊಂದಿಗೆ ಖಚಿತಪಡಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಎನ್. ಸಿದ್ದೇಶ್ವರ್ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)