7

ರೈತರ ಸಮಸ್ಯೆಗೆ ಸ್ಪಂದಿಸದ ಶಾಸಕ ತಂಗಡಗಿ: ಬಸವನಗೌಡ ಪಾಟೀಲ

Published:
Updated:
ರೈತರ ಸಮಸ್ಯೆಗೆ ಸ್ಪಂದಿಸದ ಶಾಸಕ ತಂಗಡಗಿ: ಬಸವನಗೌಡ ಪಾಟೀಲ

ಕನಕಗಿರಿ: ‘ಹತ್ತು ವರ್ಷಗಳಲ್ಲಿ ಶಾಸಕ ಶಿವರಾಜ ತಂಗಡಗಿ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ’ ಎಂದು ಹಸಿರು ಸೇನೆ ಹಾಗೂ ರೈತ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವನಗೌಡ ಪಾಟೀಲ ದೂರಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡು ಚುನಾವಣೆಯಲ್ಲಿ ರೈತ ಸಂಘಟನೆ ಬೆಂಬಲ ವ್ಯಕ್ತಪಡಿಸಿದರು ಯಾವುದೇ ಸಮಸ್ಯೆಗೆ ಶಾಸಕ ತಂಗಡಗಿ ಸ್ಪಂದಿಸಲಿಲ್ಲ. ಅಭಿವೃದ್ಧಿಗಾಗಿ ಸಾವಿರಾರು ಕೋಟಿ ಅನುದಾನ ಬಂದರು. ಲೂಟಿ ಮಾಡಿದರೆ ವಿನಃ ಅಭಿವೃದ್ಧಿಗೆ ಒತ್ತು ನೀಡಲಿಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿ ಬಸವರಾಜ ದಢೇಸೂಗುರು ಪರವಾಗಿ ಪ್ರತಿ ಗ್ರಾಮಗಳಿಗೂ ತೆರಳಿ ಪ್ರಚಾರ ಮಾಡಲಾಗುವುದು ಎಂದು ಅವರು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಬಸವರಾಜ ಧಡೇಸೂಗುರು ಮಾತನಾಡಿ ರೈತನಾಗಿರುವ ತಾವು ರೈತರ ಸಮಸ್ಯೆಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿರುವೆ ಆಯ್ಕೆ ಮಾಡಿದರೆ. ಕೆಲಸ ಮಾಡಿ ತೋರಿಸುವೆ ಎಂದರು.

ವಿದ್ಯುತ್ ಸಮಸ್ಯೆ, ಎಡದಂಡೆ ಕಾಲುವೆಗೆ ನೀರು ಬಿಡುಗಡೆ ಸೇರಿದಂತೆ ರೈತರು, ಬಡವರ ಪರವಾಗಿ ಹೋರಾಟ ನಡೆಸಿದರೆ ಶಾಸಕ ತಂಗಡಗಿ ಅವರು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ತಂಗಡಗಿ ಅವರು ವ್ಯಾಪಾರಿ ಮನೋಭಾವನೆ ವ್ಯಕ್ತಿಯಾಗಿದ್ದು ಲಾಭದ ರಾಜಕೀಯ ಮಾಡಿದ್ದಾರೆ ಎಂದು ದೂರಿದರು.

ಬಿಜೆಪಿ ಎಸ್‌ಟಿ ಮೋರ್ಚಾನ ರಾಜ್ಯ ಕಾರ್ಯದರ್ಶಿ ನಾಗರಾಜ ಬಿಲ್ಗಾರ, ಟಿಎಪಿಸಿಎಂಸ್‌ ಮಾಜಿ ಉಪಾಧ್ಯಕ್ಷ ವಿರೂಪಾಕ್ಷಪ್ಪ ಭತ್ತದ, ಎಪಿಎಂಸಿ ನಿರ್ದೇಶಕ ದೇವಪ್ಪ ತೋಳದ, ಪಟ್ಟಣ ಪಂಚಾಯಿತಿ ಸದಸ್ಯ ಕೆ. ಸುಭಾಸ, ಮಾಜಿ ನಿರ್ದೇಶಕ ವಾಗೀಶ ಹಿರೇಮಠ, ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಣ್ಣ ಕನಕಪ್ಪ, ಪ್ರಮುಖರಾದ ಮಹಾಂತೇಶ ಸಜ್ಜನ್, ಅಮರಗುಂಡಪ್ಪ ತೆಗ್ಗಿನಮನಿ, ಹನುಮಂತಪ್ಪ ಬಸರಿಗಿಡದ, ಟಿ. ಜೆ. ಶ್ರೀನಿವಾಸ ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry