ಬಾಗಲಕೋಟೆ ಜಿಲ್ಲೆ ಬನಹಟ್ಟಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ; ಪುರಸಭೆ ಮಾಜಿ ಸದಸ್ಯಗೆ ಸ್ಥಳೀಯರಿಂದ ಥಳಿತ

7

ಬಾಗಲಕೋಟೆ ಜಿಲ್ಲೆ ಬನಹಟ್ಟಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ; ಪುರಸಭೆ ಮಾಜಿ ಸದಸ್ಯಗೆ ಸ್ಥಳೀಯರಿಂದ ಥಳಿತ

Published:
Updated:
ಬಾಗಲಕೋಟೆ ಜಿಲ್ಲೆ ಬನಹಟ್ಟಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ; ಪುರಸಭೆ ಮಾಜಿ ಸದಸ್ಯಗೆ ಸ್ಥಳೀಯರಿಂದ ಥಳಿತ

ಬಾಗಲಕೋಟೆ: 10 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬನಹಟ್ಟಿಯಲ್ಲಿ ಬುಧವಾರ ಪುರಸಭೆ ಮಾಜಿ ಸದಸ್ಯ ಮೌಲಾಸಾಬ್ ಗುಡಿಹಾಳಗೆ ಸ್ಥಳೀಯರು ಥಳಿಸಿದ್ದಾರೆ.

ಬನಹಟ್ಟಿ ನಗರದ ವಾರ್ಡ್ ನಂ: 6ರಲ್ಲಿ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಮೌಲಾಸಾಬ್ ಸ್ಥಳೀಯ ಕೈಗೆ ಸಿಕ್ಕಿ ಬಿದ್ದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಬಾಲಕಿಯ ಪೋಷಕರು ಬನಹಟ್ಟಿ ಠಾಣೆಯಲ್ಲಿ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಘಟನೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಕಠುವಾ, ಉನ್ನಾವ್‌ ಹಾಗೂ ಉತ್ತರ ಪ್ರದೇಶದಲ್ಲಿ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಘಟನೆಗಳು ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಇಂಥಹ ಕೃತ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry