ಮಂಗಳವಾರ, ಡಿಸೆಂಬರ್ 10, 2019
24 °C

ವೀರಶೈವ ಪಂಚಮಸಾಲಿ ಗುರುಪೀಠಕ್ಕೆ ನೂತನ ಸ್ವಾಮೀಜಿಯಾಗಿ ವಚನಾನಂದ ಸ್ವಾಮೀಜಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೀರಶೈವ ಪಂಚಮಸಾಲಿ ಗುರುಪೀಠಕ್ಕೆ ನೂತನ ಸ್ವಾಮೀಜಿಯಾಗಿ ವಚನಾನಂದ ಸ್ವಾಮೀಜಿ ಆಯ್ಕೆ

ದಾವಣಗೆರೆ: ವೀರಶೈವ ಪಂಚಮಸಾಲಿ ಗುರುಪೀಠಕ್ಕೆ ನೂತನ ಸ್ವಾಮೀಜಿಯಾಗಿ ಶ್ವಾಸ ಗುರು ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.

ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಅವರು ಬುಧವಾರ ಘೋಷಣೆ ಮಾಡಿದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಬಳಿ ವೀರಶೈವ ಪಂಚಮಸಾಲಿ ಜಗದ್ಗುರು ಪೀಠ ಇದೆ.

ಪೀಠದ ಧರ್ಮದರ್ಶಿ ಸಮಿತಿ ಸಭೆಯಲ್ಲಿ ವಚನಾನಂದ ಸ್ವಾಮೀಜಿ ಅವರ ಆಯ್ಕೆಗೆ ಸಮಿತಿ ಸಮ್ಮತಿಸಿದೆ. ಇದೇ 20ರಂದು ವಚನಾನಂದ ಸ್ವಾಮೀಜಿಗೆ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ.

ಪೀಠಕ್ಕಾಗಿ 40 ಜನ ಸ್ವಾಮೀಜಿಗಳ ಸಂದರ್ಶನ ನಡೆಸಲಾಗಿದೆ. ಇವರಲ್ಲಿ ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.

ಪ್ರತಿಕ್ರಿಯಿಸಿ (+)