ಶನಿವಾರ, ಡಿಸೆಂಬರ್ 14, 2019
20 °C

ಇಂದು ‘ಸುಪ್ರೀಂ’ ತೀರ್ಪು?

ಪಿಟಿಐ Updated:

ಅಕ್ಷರ ಗಾತ್ರ : | |

ಇಂದು ‘ಸುಪ್ರೀಂ’ ತೀರ್ಪು?

ನವದೆಹಲಿ: ಸಿಬಿಐ ನ್ಯಾಯಾಧೀಶ ಬಿ.ಎಚ್. ಲೋಯ ನಿಗೂಢ ಸಾವು ಪ್ರಕರಣದ ಸ್ವತಂತ್ರ ತನಿಖೆಗೆ ಕೋರಿದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್‌ ಗುರುವಾರ ತೀರ್ಪು ನೀಡುವ ಸಾಧ್ಯತೆ ಇದೆ.

ಲೋಯ ಶಂಕಾಸ್ಪದ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸ ಲಾಗಿತ್ತು. ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.

ರಾಜಕೀಯವಾಗಿ ಭಾರಿ ಮಹತ್ವ ಪಡೆದಿದ್ದ ಸೊಹ್ರಾಬುದ್ದೀನ್‌ ಶೇಖ್‌ ನಕಲಿ ಎನ್‌ಕೌಂಟರ್‌ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ಲೋಯ 2014ರಲ್ಲಿ ಮೃತಪಟ್ಟಿದ್ದರು. ಲೋಯ ಅವರದು ಸಹಜ ಸಾವಲ್ಲ ಎಂದು ಅವರ ಸಹೋದರಿ ಶಂಕೆ ವ್ಯಕ್ತಪಡಿಸಿದ್ದರು.

ಪ್ರತಿಕ್ರಿಯಿಸಿ (+)