ಎಂಇಪಿ: 75 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

7

ಎಂಇಪಿ: 75 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

Published:
Updated:

ಬೆಂಗಳೂರು: ಅಖಿಲ ಭಾರತ ಮಹಿಳಾ ಎಂಪವರ್‌ಮೆಂಟ್‌ ಪಾರ್ಟಿ (ಎಐಎಂಇಪಿ) ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಯುವ 75 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.

ಪಕ್ಷದ ಅಧ್ಯಕ್ಷೆ ಡಾ. ನೌಹೀರಾ ಶೇಖ್‌ ಬುಧವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ‘224 ಕ್ಷೇತ್ರಗಳ ಪೈಕಿ ಮಹಿಳೆಯರಿಗೆ 35 ಸ್ಥಾನ ನೀಡಲಾಗಿದೆ. ಇದರ ಜೊತೆಗೆ 8 ಕ್ಷೇತ್ರಗಳನ್ನು ರೈತರಿಗೆ ಮೀಸಲಿಡಲಾಗಿದೆ’ ಎಂದರು.

ನರ್ಸ್ ಜಯಲಕ್ಷ್ಮಿ ಬಿಟಿಎಂ ಲೇಔಟ್ ಕ್ಷೇತ್ರದಿಂದ, ಗುರುಮಲ್ಲೇಶ್ ಚಾಮುಂಡೇಶ್ವರಿ ಕ್ಷೇತ್ರದಿಂದ, ಶಶಿಕಲಾ ವರುಣಾದಿಂದ, ಸೈಯದ್ ಅಸ್ಲಾಂ ಚಾಮರಾಜಪೇಟೆ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಅವರು ತಿಳಿಸಿದರು.

ಗುರುವಾರದಿಂದಲೇ ಎಲ್ಲ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಲಾಗುತ್ತದೆ ಎಂದರು.

‘2–3 ದಿನಗಳಲ್ಲಿ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡುತ್ತೇನೆ. ಇದೇ 26ರಿಂದ ಮೇ 8ರವರೆಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ, ಪ್ರಚಾರ ಕೈಗೊಳ್ಳುತ್ತೇನೆ’ ಎಂದರು.

‘ಪಕ್ಷ 100 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ ಎಂದು ಅಂದಾಜು ಮಾಡಲಾಗಿತ್ತು. ಆದರೆ, ಕಾರ್ಯಕರ್ತರ ಉತ್ಸಾಹ ಹೆಚ್ಚಾಗುತ್ತಿದೆ. ಮಹಿಳೆಯರು ಎಂಇಪಿ ಪರ ಒಲವು ತೋರುತ್ತಿರುವುದರಿಂದ 150 ಸ್ಥಾನ ಗಳಿಸುವುದು ಖಚಿತ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry