ಮಂಗಳವಾರ, ಆಗಸ್ಟ್ 4, 2020
26 °C

ಸ್ಯಾಫ್‌ ಕಪ್‌ ಫುಟ್‌ಬಾಲ್‌: ‘ಬಿ’ ಗುಂಪಿನಲ್ಲಿ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

ಸ್ಯಾಫ್‌ ಕಪ್‌ ಫುಟ್‌ಬಾಲ್‌: ‘ಬಿ’ ಗುಂಪಿನಲ್ಲಿ ಭಾರತ

ನವದೆಹಲಿ: ಭಾರತ ತಂಡದವರು ಮುಂಬರುವ ಸ್ಯಾಫ್‌ ಕಪ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ‘ಬಿ’ ಗುಂಪಿನಲ್ಲಿ ಆಡಲಿದ್ದಾರೆ. ಮಾಲ್ಡೀವ್ಸ್‌ ಮತ್ತು ಶ್ರೀಲಂಕಾ ತಂಡಗಳೂ ಇದೇ ಗುಂಪಿನಲ್ಲಿವೆ.

ಆತಿಥೇಯ ಬಾಂಗ್ಲಾದೇಶ, ನೇಪಾಳ, ಭೂತಾನ್‌ ಮತ್ತು ಪಾಕಿಸ್ತಾನ ತಂಡಗಳು ‘ಎ’ ಗುಂಪಿನಲ್ಲಿ ಸ್ಥಾನ ಗಳಿಸಿವೆ.

ಸ್ಯಾಫ್‌ ಸುಜುಕಿ ಕಪ್‌ ಟೂರ್ನಿ ಸೆಪ್ಟೆಂಬರ್‌ 4ರಿಂದ 15ರವರೆಗೆ ಬಾಂಗ್ಲಾದೇಶದಲ್ಲಿ ಜರುಗಲಿದೆ. ಭಾರತ ತಂಡ ಟೂರ್ನಿಯಲ್ಲಿ ಒಟ್ಟು ಏಳು ಪ್ರಶಸ್ತಿಗಳನ್ನು ಜಯಿಸಿದ್ದು ಮೂರು ಬಾರಿ ರನ್ನರ್ಸ್‌ ಅಪ್‌ ಸಾಧನೆ ಮಾಡಿದೆ. ಅಫ್ಗಾನಿಸ್ತಾನ, ಬಾಂಗ್ಲಾದೇಶ, ಮಾಲ್ಡೀವ್ಸ್‌ ಮತ್ತು ಶ್ರೀಲಂಕಾ ತಂಡಗಳು ತಲಾ ಒಮ್ಮೆ ಚಾಂ‍ಪಿಯನ್‌ ಪಟ್ಟ ಅಲಂಕರಿಸಿವೆ.

ಭಾರತ ಮತ್ತು ಮಾಲ್ಡೀವ್ಸ್‌ ತಂಡಗಳು ಮೂರು ಬಾರಿ ಫೈನಲ್‌ನಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ ಎರಡು ಸಲ (1997 ಮತ್ತು 2009)  ಗೆದ್ದಿದ್ದು, ಮಾಲ್ಡೀವ್ಸ್‌ (2008) ಒಮ್ಮೆ ವಿಜಯಿಯಾಗಿದೆ.

2015ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ ಚಾಂಪಿಯನ್‌ ಆಗಿತ್ತು. ಫೈನಲ್‌ನಲ್ಲಿ ಅಫ್ಗಾನಿಸ್ತಾನವನ್ನು ಸೋಲಿಸಿತ್ತು.

ಈ ಸಲದ ಟೂರ್ನಿಯ ಎಲ್ಲಾ ಪಂದ್ಯಗಳು ಬಂಗ ಬಂಧು ಕ್ರೀಡಾಂಗಣದಲ್ಲಿ ಆಯೋಜನೆಯಾಗಿವೆ. ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಗಳಿಸುವ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.