ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮಾನಾಥ ರೈ, ಅಭಯಚಂದ್ರ ಜೈನ್, ಮುನೀರ್ ಕಾಟಿಪಳ್ಳ ನಾಮಪತ್ರ ಸಲ್ಲಿಕೆ

Last Updated 19 ಏಪ್ರಿಲ್ 2018, 8:04 IST
ಅಕ್ಷರ ಗಾತ್ರ

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಬಿ.ರಮಾನಾಥ ರೈ, ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ‌ ಕೆ.ಅಭಯಚಂದ್ರ ಜೈನ್ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿಯಾಗಿ ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಗುರುವಾರ ನಾಮಪತ್ರ ಸಲ್ಲಿಸಿದರು.

ರಮಾನಾಥ ರೈ ಬಂಟ್ವಾಳ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಜೊತೆಗಿದ್ದರು.

(ಕೆ.ಅಭಯಚಂದ್ರ ಜೈನ್)

ಅಭಯಚಂದ್ರ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಮೂಡುಬಿದಿರೆ ಸ್ವರ್ಣ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಪಕ್ಷದ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧನಂಜಯ ಮಟ್ಟು, ಮೂಡುಬಿದಿರೆ ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಮತ್ತು ಕಾಂಗ್ರೆಸ್ ಮುಖಂಡ ರತ್ನಾಕರ ಸಿ‌. ಮೊಯಿಲಿ ನಾಮಪತ್ರ ಸಲ್ಲಿಸುವಾಗ ಜೊತೆಗಿದ್ದರು.

(ಮುಖಂಡರು ನಾಮಪತ್ರ ಸಲ್ಲಿಸಲು ತೆರಳುವಾಗ ಮೆರವಣಿಗೆಯಲ್ಲಿ ಬೆಂಬಲಿಗರು)

ಮುನೀರ್ ಕಾಟಿಪಳ್ಳ ನಾಮಪತ್ರ ಸಲ್ಲಿಸುವ ‌ಮುನ್ನ ಮಂಗಳೂರಿನ ಪಿವಿಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಸಿಪಿಎಂ ಕಾರ್ಯಕರ್ತರು ಮತ್ತು ಅಭಿಮಾನಿಗಳ ಜೊತೆ ಮೆರವಣಿಗೆಯಲ್ಲಿ ಸಾಗಿದರು.‌ ಕೆಂಪು ವಸ್ತ್ರಧಾರಿಗಳಾಗಿದ್ದ ನೂರಾರು ಮಂದಿ ಮುನೀರ್ ಪರ‌ ಘೋಷಣೆ ಕೂಗುತ್ತಾ ಸಾಗಿದರು. ಸಿಪಿಎಂ ಜಿಲ್ಲಾ ಮಂಡಳಿ ಕಾರ್ಯದರ್ಶಿ ಕೆ.ವಸಂತ ಆಚಾರಿ, ಡಿವೈಎಫ್ಐ ಮುಖಂಡ ಬಿ.ಕೆ.ಇಮ್ತಿಯಾಝ್ ನಾಮಪತ್ರ ಸಲ್ಲಿಸುವಾಗ ಜೊತೆಗಿದ್ದರು.

(ಸಿಪಿಎಂ ಬೆಂಬಲಿಗರು)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT