ಮಂಗಳವಾರ, ಜೂಲೈ 7, 2020
27 °C
ಧರ್ಮಸ್ಥಳ ಸಂಸ್ಥೆಯಿಂದ ಆಮಿಷ ತೋರುವವರಿಗೆ ಉತ್ತರ

ನಮ್ಮ ಮತ ಮಾರಾಟಕ್ಕಿಲ್ಲ: ಜಾಗೃತಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಮ್ಮ ಮತ ಮಾರಾಟಕ್ಕಿಲ್ಲ: ಜಾಗೃತಿ ಅಭಿಯಾನ

ತುಮಕೂರು: ‘ನಮ್ಮ ಮತ ಮಾರಾಟಕ್ಕಿಲ್ಲ’ ಎನ್ನುವ ಜಾಗೃತಿ ಅಭಿಯಾನವನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ರಾಜ್ಯದಾದ್ಯಂತ ಪ್ರಾರಂಭಿಸಿದ್ದು, ಬುಧವಾರ ಜಿಲ್ಲೆಯಲ್ಲಿ ಸಂಸ್ಥೆಯಿಂದ ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಲಾಯಿತು.

ತುಮಕೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 3,800 ಪ್ರಗತಿ ಬಂಧು ಸ್ವಸಹಾಯ ಸಂಘಗಳು ಇವೆ. ಅಲ್ಲದೆ ಜಿಲ್ಲೆಯ ಭಾಗ 1ರಲ್ಲಿ 15 ಸಾವಿರ ಸಂಘಗಳಿವೆ. ಒಂದೂವರೆ ಲಕ್ಷ ಸದಸ್ಯರು ಇದ್ದಾರೆ. ಈ ಸದಸ್ಯರ ಮನೆಗಳ ಬಾಗಿಲುಗಳಿಗೆ ‘ನಮ್ಮ ಮತ ಮಾರಾಟಕ್ಕಿಲ್ಲ’ ಎನ್ನುವ ಸ್ಟಿಕ್ಕರ್ ಅಂಟಿಸುವ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ಸಂಸ್ಥೆ ಜಿಲ್ಲಾ ನಿರ್ದೇಶಕ ರಾಧಾಕೃಷ್ಣ ರಾವ್ ತಿಳಿಸಿದರು.

ವೀರೇಂದ್ರ ಹೆಗ್ಗಡೆ ಅವರು ಮಂಗಳವಾರ ಶ್ರೀಕ್ಷೇತ್ರದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಸಂಘಗಳನ್ನೇ ದೃಷ್ಟಿಯಲ್ಲಿ ಇಟ್ಟುಕೊಂಡು ಕೆಲವರು ಆಮಿಷ ತೋರಿಸುತ್ತಿದ್ದಾರೆ. ಒಂದು ದಿನದ ಆಮಿಷಕ್ಕೆ ಬಲಿಯಾದರೆ ರಾಜ್ಯದ ಸುರಕ್ಷತೆ ಕಷ್ಟ. ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಯೋಚಿಸಿ ಮತದಾನ ಮಾಡಬೇಕು ಎಂದು ಹೇಳಿದರು. ಪ್ರತಿ ಜಿಲ್ಲೆಯಲ್ಲಿಯೂ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಡಾ.ಸಂಜಯ್ ನಾಯಕ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.