ಪ್ರತಿಭಟನೆ: 14 ಮಂದಿಗೆ ಗಾಯ

7

ಪ್ರತಿಭಟನೆ: 14 ಮಂದಿಗೆ ಗಾಯ

Published:
Updated:

ಶ್ರೀನಗರ: ಜಮ್ಮು- ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಈಚೆಗೆ ಎಂಟು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧ ರಾಜ್ಯದ ವಿವಿಧೆಡೆ ವಿದ್ಯಾರ್ಥಿಗಳು ಗುರುವಾರ ಮುಂದುವರಿಸಿದ ಪ್ರತಿಭಟನೆ ವೇಳೆ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ 14 ಮಂದಿ ಗಾಯಗೊಂಡಿದ್ದಾರೆ.

ಶೋಪಿಯಾನ್‌ ಪಟ್ಟಣದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತಮ್ಮನ್ನು ಚದುರಿಸಲು ಮುಂದಾದ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದರು.

ಭದ್ರತಾ ಪಡೆಗಳ ಸಿಬ್ಬಂದಿ ಪಿಲೆಟ್ ಗನ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದರು ಎಂದು ವರದಿಯಾಗಿದೆ. ಕಠುವಾ ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿರುವುದರಿಂದ ಶ್ರೀನಗರ, ಗಂಧೇರ್‌ಬಲ್, ಪುಲ್ವಾಮಾ, ಕುಲ್ಗಾಂ, ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಅಧಿಕಾರಿಗಳು ಗುರುವಾರ ತರಗತಿಗಳನ್ನು ರದ್ದುಪಡಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry