ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ವಿ. ಶಂಕರ್ ಅವರನ್ನು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಎಚ್.ಎನ್. ಗೋಪಾಲಕೃಷ್ಣ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕ (ಸಿಬ್ಬಂದಿ ಮತ್ತು ಪರಿಸರ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.