ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ

7

ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ

Published:
Updated:
ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಏಪ್ರಿಲ್ 23ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.ಈ ವಿಷಯವನ್ನು ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತಮ್ಮ ಫೇಸ್‍ಬುಕ್ ಪುಟದಲ್ಲಿ ತಿಳಿಸಿದ್ದಾರೆ.

ಇದೀಗ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾದಾಮಿಯಿಂದಲೂ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವುದು ಖಚಿತವಾಗಿದೆ.

‘ನಾನು ಎರಡು ಕಡೆ ಸ್ಪರ್ಧಿಸಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್‌ ನಿರ್ಧರಿಸಲಿದೆ’ ಎಂದು ಮುಖ್ಯಮಂತ್ರಿ ಗುರುವಾರ ಹೇಳಿದ್ದರು.

‘ನಾನು ಹೈಕಮಾಂಡ್ ಅಲ್ಲ. ಈ ರಾಜ್ಯದ ಮುಖ್ಯಮಂತ್ರಿ ಅಷ್ಟೆ. ಬಾದಾಮಿ ಕ್ಷೇತ್ರದ ಸ್ಪರ್ಧೆಯ ವಿಚಾರ ಈ ತಿಂಗಳ 23 ಅಥವಾ 24ರಂದು ಬಗೆಹರಿಯಲಿದೆ. ನನಗೆ ಮತ್ತು ಬಾದಾಮಿ ಕ್ಷೇತ್ರದ ಜನರಿಗೆ ಯಾವುದೇ ಗೊಂದಲ ಇಲ್ಲ. ಮಾಧ್ಯಮದವರು ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಹೇಳಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry