ಪಾಠದಷ್ಟೇ ಪಠ್ಯೇತರ ಚಟುವಟಿಕೆ ಮುಖ್ಯ

7

ಪಾಠದಷ್ಟೇ ಪಠ್ಯೇತರ ಚಟುವಟಿಕೆ ಮುಖ್ಯ

Published:
Updated:
ಪಾಠದಷ್ಟೇ ಪಠ್ಯೇತರ ಚಟುವಟಿಕೆ ಮುಖ್ಯ

ಸಂತೇಮರಹಳ್ಳಿ: ಸಮೀಪದ ಕುದೇರು ಗ್ರಾಮದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುಧವಾರ ಸಾಂಸ್ಕೃತಿಕ ಚಟುವಟಿಕೆ ಹಾಗೂ ಎನ್ಎಸ್ಎಸ್ ಸಮಾರೋಪ ಸಮಾರಂಭ ನಡೆಯಿತು.

ನಿವೃತ್ತ ಪ್ರಾಂಶುಪಾಲ ಲಿಂಗಣ್ಣ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಬೇಕಾದರೂ ಆಯ್ಕೆ ಉತ್ತಮವಾಗಿರಬೇಕು. ನಿಮ್ಮ ಯೋಚನಾ ಶಕ್ತಿ ಪಠ್ಯ ಚಟುವಟಿಕೆಗಳಿಗೆ ಮೀಸಲಾಗಿರಬೇಕು. ಪದವಿ ನಂತರ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ನಿಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕು ಎಂದು ತಿಳಿಸಿದರು.

ಮೈಸೂರು ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕಿ ಜ್ಯೋತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಅವಶ್ಯವಾಗಿವೆ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ನಡೆಯುವ ದೈನಂದಿನ ಚಟುವಟಿಕೆಗಳು, ಎನ್ಎಸ್ಎಸ್ ಶಿಬಿರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಎಚ್.ಆರ್. ಮಹದೇವಸ್ವಾಮಿ, ಉಪನ್ಯಾಸಕರಾದ ಮಹೇಂದ್ರ, ಕೆ. ಮಧುಸೂದನ್, ಪ್ರಸನ್ನ, ಶ್ರೀನಿವಾಸ್, ಡಾ.ಶಾಂತರಾಜು, ಮಮತಾ, ಕವಿತಾ, ನಾಗೇಂದ್ರ, ಮಧು, ಪ್ರಭುಸ್ವಾಮಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry