ಮೂಡಿಗೆರೆ: ಮೋಟಮ್ಮ ನಾಮಪತ್ರ ಸಲ್ಲಿಕೆ

7
ಮರೆವಣಿಗೆಯಲ್ಲಿ ಬಂದು ಇಂದು ಮತ್ತೊಂದು ಸೆಟ್‌ ನಾಮಪತ್ರ ಸಲ್ಲಿಕೆ

ಮೂಡಿಗೆರೆ: ಮೋಟಮ್ಮ ನಾಮಪತ್ರ ಸಲ್ಲಿಕೆ

Published:
Updated:

ಮೂಡಿಗೆರೆ: ವಿಧಾನ ಪರಿಷತ್‌ ಸದಸ್ಯೆ ಮೋಟಮ್ಮ ಕಾಂಗ್ರೆಸ್‌ ಪಕ್ಷದಿಂದ ಗುರುವಾರ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12ಕ್ಕೆ ತಾಲ್ಲೂಕು ಕಚೇರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್‌. ಪ್ರಭಾಕರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಯು.ಎಚ್‌.ಹೇಮಶೇಖರ್‌, ಮಾಜಿ ಅಧ್ಯಕ್ಷ ಬಿ.ಎಸ್‌. ಜಯರಾಂ, ವಕ್ತಾರ ಎಂ.ಎಸ್‌.ಅನಂತ್‌ ಅವರೊಂದಿಗೆ ತಾಲ್ಲೂಕು ಕಚೇರಿಗೆ ಬಂದು ಅವರು ನಾಮಪತ್ರ ಸಲ್ಲಿಸಿದರು.

ಯಾವುದೇ ಸದ್ದಿಲ್ಲದೇ ನಾಮಪತ್ರ ಸಲ್ಲಿಸಿರುವ ಕುರಿತು ಪ್ರಶ್ನಿಸಿದಾಗ, ‘ಪಕ್ಷದ ವತಿಯಿಂದ ಇದೇ 20ರಂದು ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಚುನಾವಣೆಯಲ್ಲೂ ನಾಮಪತ್ರ ಸಲ್ಲಿಕೆಯ ಹಿಂದಿನ ದಿನ ಒಂದು ಸೆಟ್‌ ನಾಮಪತ್ರ ಸಲ್ಲಿಸುತ್ತಿದ್ದೆವು. ಅದರಂತೆ ಇಂದು ಕೂಡ ನಾಮಪತ್ರ ಸಲ್ಲಿಸಿದ್ದು, ಶುಕ್ರವಾರ ಬೆಳಿಗ್ಗೆ 10ರಿಂದ ಕಾಂಗ್ರೆಸ್‌ ಕಚೇರಿಯಿಂದ ಕಾರ್ಯಕರ್ತರೊಂದಿಗೆ ಮೆರವಣಿಗೆ ಬಂದು, ಮಧ್ಯಾಹ್ನ 12ರಿಂದ 1ರೊಳಗೆ ಮತ್ತೊಂದು ಸೆಟ್‌ ನಾಮಪತ್ರ ಸಲ್ಲಿಸಲಾಗುವುದು’ ಎಂದು ನಾಮಪತ್ರ ಸಲ್ಲಿಸಲು ಬಂದಿದ್ದ ಕಾಂಗ್ರೆಸ್‌ ಪದಾಧಿಕಾರಿಗಳು ಪತ್ರಿಕೆಗೆ ತಿಳಿಸಿದರು.

₹5.68 ಕೋಟಿ ಸ್ಥಿರಾಸ್ತಿ: ಗುರುವಾರ ನಾಮಪತ್ರ ಸಲ್ಲಿಸಿರುವ ವಿಧಾನ ಪರಿಷತ್‌ ಸದಸ್ಯೆ ಮೋಟಮ್ಮ ತಮ್ಮ ಹಾಗೂ ಪತಿ ವೆಂಕಟರಾಮು ಅವರು ಆಸ್ತಿ ವಿವರದ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ತಮ್ಮ ಹೆಸರಿನಲ್ಲಿ ₹ 5.68 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹ 1.46 ಕೋಟಿ ಮೌಲ್ಯದ ಚರಾಸ್ತಿ ಹಾಗೂ ತಮ್ಮ ಪತಿ ವೆಂಕಟರಾಮು ಅವರ ಬಳಿ ₹ 99,72,693 ಮೌಲ್ಯದ ಚರಾಸ್ತಿ ಹಾಗೂ ₹55 ಲಕ್ಷ ಮೌಲ್ಯದ ಸ್ಥಿರಾಸ್ತಿಯಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry