ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ : ಸಿದ್ದರಾಮಯ್ಯ

7

ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ : ಸಿದ್ದರಾಮಯ್ಯ

Published:
Updated:
ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ : ಸಿದ್ದರಾಮಯ್ಯ

ಮೈಸೂರು: ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ವಿಚಾರದಲ್ಲಿ ಹೈಕಮಾಂಡ್‌ ಸೂಚನೆಗೆ ಕಾದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದರು.

‘ಬಾದಾಮಿಯಿಂದಲೂ ಸ್ಪರ್ಧೆಗೆ ಒತ್ತಡ ಹೆಚ್ಚುತ್ತಿದೆ. ಆ ಭಾಗದ ಮುಖಂಡರು ಪದೇಪದೇ ಭೇಟಿಯಾಗಿ ಮನವಿ ಮಾಡುತ್ತಿದ್ದಾರೆ. ಈ ವಿಚಾರವನ್ನು ಹೈಕಮಾಂಡ್‌ ನಿರ್ಧಾರಕ್ಕೆ ಬಿಟ್ಟಿದ್ದು, ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ’ ಎಂದು ಮಾಧ್ಯಮ ಸಂವಾದದಲ್ಲಿ ಹೇಳಿದರು.

ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸ್ಪರ್ಧಿಸಿ ಗೆದ್ದರೆ ಯಾವ ಕ್ಷೇತ್ರಕ್ಕೆ ರಾಜೀನಾಮೆ ಕೊಡುತ್ತೀರಿ ಎಂಬ ಪ್ರಶ್ನೆಗೆ ‘ಎರಡೂ ಕಡೆ ಗೆಲ್ಲುವುದು ಖಚಿತ. ರಾಜೀನಾಮೆ ಬಗ್ಗೆ ಆಮೇಲೆ ನಿರ್ಧಾರ ಕೈಗೊಳ್ಳುತ್ತೇನೆ’ ಎಂದರು.

ಈ ಮಧ್ಯೆ, ಏ.23ರಂದು ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪುತ್ರ ಡಾ.ಯತೀಂದ್ರ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಪಕ್ಷದ ಶಾಸಕರು, ಮುಖಂಡರು ನನ್ನನ್ನು ಭೇಟಿಯಾಗಿ ಚರ್ಚೆ ನಡೆಸುವಾಗ ಯತೀಂದ್ರ ಇದ್ದ. ಹೀಗಾಗಿ, ಬರೆದುಕೊಂಡಿದ್ದಾನೆ. ಇಂದು ಅಥವಾ ನಾಳೆ ಈ ವಿಚಾರ ಅಂತಿಮವಾಗಲಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry