ನಾಮಪತ್ರ ಸ್ವೀಕರಿಸದಂತೆ ಮನವಿ

7
ರೈತ ಸಂಘದಿಂದ ಶಾಸಕರ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ‍ಪಡೆದ ಆರೋಪ

ನಾಮಪತ್ರ ಸ್ವೀಕರಿಸದಂತೆ ಮನವಿ

Published:
Updated:

ಮುಳಬಾಗಿಲು: ಶಾಸಕ ಕೊತ್ತೂರು ಜಿ.ಮಂಜುನಾಥ್ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆದು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇವರ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ಸ್ವೀಕರಿಸಬಾರದು ಮತ್ತು ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಗುರುವಾರ ಚುನಾವಣಾ ಅಧಿಕಾರಿಗಳಿಗೆ ಮನವಿ ನೀಡಿದರು.

ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಕಳೆದ ಚುನಾವಣೆಯಲ್ಲಿ ಮಂಜುನಾಥ್ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ಇದುವರೆಗೂ ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಇದೇ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಮತ್ತೆ ಅಧಿಕಾರ ಪಡೆಯಲು ಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾಮಪತ್ರ ಸ್ವೀಕರಿಸಬಾರದು ಎಂದರು.

ಶಾಸಕರು ಮೂಲ ಬೈರಾಗಿ ಜಾತಿಯವರಾಗಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಬುಡ್ಗ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದಿದ್ದಾರೆ. ಇದನ್ನು‌‌‌ ರದ್ದುಪಡಿಸಿ ಪರಿಶಿಷ್ಟ ಜಾತಿಯವರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಶಾಸಕರು ಯಾವ ಜಾತಿಗೆ ಸೇರುವರು ಎನ್ನುವುದನ್ನು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸುವವರೆಗೂ ಚುನಾವಣೆಗೆ ಸ್ಪರ್ದಿಸಲು ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕಲ್ವ ಮಂಜಲಿ ರಾಮುಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ದೊಡ್ಡಕುರುಬರಹಳ್ಳಿ ಶಂಕರಪ್ಪ, ಜಬೀಉಲ್ಲಾ, ಅಬೀದ್ ಖಾನ್, ಸೈಯದ್ ಫಿರ್ದೀಸ್, ಗಂಗರಾಜು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry