ಕ್ಷೇತ್ರದ ಅಭಿವೃದ್ಧಿ ಮುಖ್ಯ: ತಂಗಡಗಿ

7

ಕ್ಷೇತ್ರದ ಅಭಿವೃದ್ಧಿ ಮುಖ್ಯ: ತಂಗಡಗಿ

Published:
Updated:

ಕನಕಗಿರಿ: ‘ಓದು, ಬರಹ ಬಾರದ ಬಸವರಾಜ ಧಡೇಸೂಗುರು ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಇಂತಹ ಅಭ್ಯರ್ಥಿಯಿಂದ ಕ್ಷೇತ್ರದ ಅಭಿವೃದ್ಧಿ ಅಸಾಧ್ಯ’ ಎಂದು ಶಾಸಕ ಶಿವರಾಜ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಎರಡು ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಸಣ್ಣ ನೀರಾವರಿ ಇಲಾಖೆ ಸಚಿವನಾಗಿದ್ದ ಸಮಯದಲ್ಲಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡಿದ್ದೆ. ಇಂತಹ ಅಧಿಕಾರಿಗಳಿಂದ ಹಣ ಪಡೆದಿರುವ ಬಿಜೆಪಿಯವರು ಅವರ ಪರವಾಗಿ ಲಾಬಿ ಮಾಡುತ್ತಿದ್ದಾರೆ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ’ ಎಂದು ದೂರಿದರು.

‘ಈ ಹಿಂದಿನ ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹೈದರಾಬಾದ್ ಕರ್ನಾಟಕಕ್ಕೆ ಸಂವಿಧಾನದ 371 (ಜೆ) ತಿದ್ದುಪಡಿ ಮೂಲಕ ಸೌಲಭ್ಯ ಕಲ್ಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಂಘದಲ್ಲಿದ್ದ ರೈತರ ₹ 50 ಸಾವಿರ ಸಾಲ ಮನ್ನಾ ಮಾಡಿದ್ದಾರೆ. ಬಡವರು, ಹಿಂದುಳಿದವರ ಏಳಿಗೆಗೆ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ತಿಳಿಸಿದರು. ಈ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಏನು ಒಳ್ಳೆಯದು ಮಾಡಿದೆ ಎಂದು ಅವರು ಪ್ರಶ್ನಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮುಕುಂದರಾವ್ ಭವಾನಿಮಠ ಮಾತನಾಡಿ, ಬಿಜೆಪಿ ಅಭ್ಯರ್ಥಿ ಹಣದ ಆಮಿಷ ಒಡ್ಡಿ ಮತದಾರರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದರು.ನವಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಶನಿವಾರದಿಂದ ಪ್ರಚಾರ ನಡೆಸುತ್ತೇನೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಡ್ಡಿಶ್ರೀನಿವಾಸ, ರಾಮ ನಾಯಕ್ ಮಾತನಾಡಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ನೆಕ್ಕಂಟಿ ಸೂರ್ಯಬಾಬು, ರಮೇಶ ನಾಯಕ, ಯಮನೂರಪ್ಪ ನಾಯಕ, ಶರಣ ಬಸವರಾಜ ರಡ್ಡಿ, ಗೌಸಿಯಾಬೇಗಂ, ಜನಕಮುನಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರವಿ ಭಜಂತ್ರಿ, ಉಪಾಧ್ಯಕ್ಷ ಹುಲಗಪ್ಪ ವಾಲೇಕಾರ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಕನಕಪ್ಪ ತಳವಾರ, ಮಾಜಿ ಅಧ್ಯಕ್ಷ ಹೊನ್ನುರುಸಾಬ, ಪ್ರಮುಖರಾದ ಗಂಗಾಧರಸ್ವಾಮಿ, ಸಿದ್ದಪ್ಪ ನೀರ್ಲೂಟಿ, ಭತ್ತದ ಶರಣಪ್ಪ, ಸಂಗಪ್ಪ ಸಜ್ಜನ್, ನಾಗೇಶ ಬಡಿಗೇರ, ನಾಗೇಶ ರೊಟ್ಟಿ, ಶರಣೆಗೌಡ ಪಾಟೀಲ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry