ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ, ಬಾಲಕ ಸಾವು

6

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ, ಬಾಲಕ ಸಾವು

Published:
Updated:
ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ, ಬಾಲಕ ಸಾವು

ಬಂದಾ: ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ತಮ್ಮ ಮಗ ಮೃತಪಟ್ಟಿದ್ದಾನೆ ಎಂದು ಇಲ್ಲಿನ ಕುಟುಂಬವೊಂದು ಆರೋಪಿಸಿದೆ.

ವೈದ್ಯರಿಗೆ ನೀಡಲು ತಮ್ಮ ಬಳಿ ಹಣವಿಲ್ಲದ ಕಾರಣ ಮಗನಿಗೆ ಚಿಕತ್ಸೆ ನಿರಾಕರಿಸಲಾಯಿತು ಎಂದು ಮೃತ ಬಾಲಕನ ತಂದೆ ಹೇಳಿಕೆ ನೀಡಿದ್ದಾರೆ.

‘ನನ್ನ ಬಳಿ ಹಣವಿಲ್ಲದ ಕಾರಣ ವೈದ್ಯರು ನನ್ನ ಮಗನಿಗೆ ಚಿಕಿತ್ಸೆ ನೀಡಲಿಲ್ಲ. ಅವರು ಹಣಕ್ಕಾಗಿ ನನ್ನನ್ನು ಪದೇಪದೆ ಒತ್ತಾಯಿಸಿದರು’ ಎಂದಿದ್ದಾರೆ.

ಬಾಲಕನ ಶವವನ್ನು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕೊಂಡೊಯ್ದಿರುವ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಪ್ರಕರಣದ ತನಿಖೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry