ಚುನಾವಣೆ; 10 ನಾಮಪತ್ರ ಸಲ್ಲಿಕೆ

7

ಚುನಾವಣೆ; 10 ನಾಮಪತ್ರ ಸಲ್ಲಿಕೆ

Published:
Updated:

ವಿಜಯಪುರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಗುರುವಾರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ, ಏಳು ವಿಧಾನಸಭಾ ಕ್ಷೇತ್ರಗಳಿಗೆ 10 ನಾಮಪತ್ರ ಸಲ್ಲಿಕೆಯಾಗಿವೆ.

ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಜಾತ್ಯತೀತ ಜನತಾ ದಳದ ಅಭ್ಯರ್ಥಿಯಾಗಿ ಮಂಗಳಾದೇವಿ ಬಿರಾದಾರ, ಜನಸಾಮಾನ್ಯರ ಪಕ್ಷದಿಂದ ಅಯ್ಯಪ್ಪ ದೊರೆ ನಾಮಪತ್ರ ಸಲ್ಲಿಸಿದ್ದಾರೆ.

ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸೋಮನಗೌಡ ಬಸನಗೌಡ ಪಾಟೀಲ, ಜೆಡಿಎಸ್‌ನಿಂದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಕಾಂಗ್ರೆಸ್‌ನಿಂದ ಬಾಪುಗೌಡ ಶಂಕರಗೌಡ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ. ಮೂರು ಪಕ್ಷಗಳ ಪ್ರಮುಖ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸಿರುವುದು ವಿಶೇಷ.

ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸೋಮನಗೌಡ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ. ಬಬಲೇಶ್ವರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿಜಯಕುಮಾರ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ.

ನಾಗಠಾಣ ವಿಧಾನಸಭಾ ಕ್ಷೇತ್ರದಿಂದ ಶಿವಸೇನಾ ಪಕ್ಷದಿಂದ ಮರಗಣ್ಣ ಮಾಳಪ್ಪ ಹುನ್ನೂರ, ಇಂಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯಶವಂತರಾಯಗೌಡ ಪಾಟೀಲ, ಸಿಂದಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಭೂಸನೂರ ರಮೇಶ ಬಾಳಪ್ಪ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry