ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ?

Last Updated 20 ಏಪ್ರಿಲ್ 2018, 17:47 IST
ಅಕ್ಷರ ಗಾತ್ರ

ನವದೆಹಲಿ: ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಜಾರಿಗೆ ತರುವ ಬಗ್ಗೆ ಕೇಂದ್ರ ಸಚಿವ ಸಂಪುಟ ಶನಿವಾರ ಚರ್ಚೆ ನಡೆಸಲಿದೆ.

‘ಕಠುವಾ ಮತ್ತು ಉನ್ನಾವ್ ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯ ಹೆಚ್ಚುತ್ತಿರುವ ಸಂದರ್ಭದಲ್ಲೇ ಸರ್ಕಾರ ಈ ವಿಚಾರವನ್ನು ಚರ್ಚೆಗೆ ಎತ್ತಿಕೊಂಡಿದೆ’ ಎಂದು ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ಅತ್ಯಾಚಾರಿಗಳಿಗೆ ಸದ್ಯ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ) ಕಾಯ್ದೆಯಡಿ ಜೀವಾವಧಿ ಶಿಕ್ಷೆಯನ್ನಷ್ಟೇ ವಿಧಿಸಲು ಅವಕಾಶವಿದೆ. ಕಾಯ್ದೆಗೆ ತಿದ್ದುಪಡಿ ತಂದು, ಗಲ್ಲು ಶಿಕ್ಷೆಯನ್ನೂ ಅದರಲ್ಲಿ ಸೇರಿಸುವ ಸಲುವಾಗಿ ಸುಗ್ರೀವಾಜ್ಞೆ ತರಲು ಚಿಂತನೆ ನಡೆದಿದೆ’ ಎಂದು ಅಧಿಕಾರಿ ಹೇಳಿದ್ದಾರೆ.

ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಈ ಮಾಹಿತಿ ನೀಡಿದೆ.

‘12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಅನುಕೂಲವಾಗುವಂತೆ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್.ನರಸಿಂಹ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT