ಪರಿಷತ್‌ ಚುನಾವಣೆ ರದ್ದು: ವಿಭಾಗೀಯ ಪೀಠಕ್ಕೆ ವರ್ಗ

7

ಪರಿಷತ್‌ ಚುನಾವಣೆ ರದ್ದು: ವಿಭಾಗೀಯ ಪೀಠಕ್ಕೆ ವರ್ಗ

Published:
Updated:

ಬೆಂಗಳೂರು: ರಾಜ್ಯ ವಕೀಲರ ಪರಿಷತ್ ಚುನಾವಣೆ ರದ್ದುಪಡಿಸಿರುವ ಭಾರತೀಯ ವಕೀಲರ ಪರಿಷತ್‌ನ ಚುನಾವಣಾ ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿದ ರಿಟ್‌ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಗಿದೆ.

ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ಚುನಾವಣೆಗೆ ಸ್ಪರ್ಧಿಸಿದ್ದ ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಸಲ್ಲಿಸಿರುವ ಈ ಅರ್ಜಿ ಶುಕ್ರವಾರ ನ್ಯಾಯಮೂರ್ತಿ ಆರ್‌.ಎಸ್‌. ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

‘ನಿಯಮಗಳ ಪ್ರಕಾರ ಈ ಅರ್ಜಿ ವಿಚಾರಣೆಯನ್ನು ವಿಭಾಗೀಯ ನ್ಯಾಯಪೀಠವೇ ನಡೆಸಬೇಕಿದೆ’ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿಗಳು ಅರ್ಜಿಯನ್ನು ವಿಚಾರಣೆಗಾಗಿ ವಿಭಾಗೀಯ ಪೀಠದ ಮುಂದೆ ಪಟ್ಟಿ ಮಾಡುವಂತೆ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಸೂಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry